ಗದುಗಿಗೆ ಅಂಟಿದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ

ರಾಜ್ಯದಲ್ಲಿ ಇತ್ತೀಚೆಗಷ್ಟೇ ಪಿಎಸೈ ಪರೀಕ್ಷೆಯ ಅಕ್ರಮ ಹಗರಣದ ಕಮಟು ಮಾಸುವ ಮುನ್ನವೇ ಇಂಥದ್ದೇ ಮತ್ತೊಂದು ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ವರದಿಯಾಗಿದ್ದು, ದಂಗುಬಡಿಸುವಂತಿದೆ.

Written by - Zee Kannada News Desk | Last Updated : Aug 22, 2022, 09:52 AM IST
  • ಇತ್ತೀಚೆಗಷ್ಟೇ ಕೆಪಿಟಿಸಿಎಲ್ ನ ಕಿರಿಯ ಸಹಾಯಕ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸರಾಗವಾಗಿ ನಡೆದಿತ್ತು.
ಗದುಗಿಗೆ ಅಂಟಿದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ title=

ಗದಗ: ರಾಜ್ಯದಲ್ಲಿ ಇತ್ತೀಚೆಗಷ್ಟೇ ಪಿಎಸೈ ಪರೀಕ್ಷೆಯ ಅಕ್ರಮ ಹಗರಣದ ಕಮಟು ಮಾಸುವ ಮುನ್ನವೇ ಇಂಥದ್ದೇ ಮತ್ತೊಂದು ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ವರದಿಯಾಗಿದ್ದು, ದಂಗುಬಡಿಸುವಂತಿದೆ.

ಇತ್ತೀಚೆಗಷ್ಟೇ ಕೆಪಿಟಿಸಿಎಲ್ ನ ಕಿರಿಯ ಸಹಾಯಕ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸರಾಗವಾಗಿ ನಡೆದಿತ್ತು. ಆದರೆ, ಸದರಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗವಾದ ವಿಷಯದ ಜಾಡು ಹಿಡಿದು ಹೊರಟ ಸೈಬರ್ ಕ್ರೈಂ ಪೊಲೀಸರು ನೇರ ಬಂದು ತಲುಪಿದ್ದು ಗದಗಕ್ಕೆ!

ನಡೆದಿದ್ದೇನು?:

ಗದಗನಲ್ಲಿಯೇ ಪರೀಕ್ಷಾ ಪತ್ರಿಕೆ ಲೀಕ್ ಆಗಿದೆಯೆಂಬ ವಿಷಯದ ಬೆನ್ನುಬಿದ್ದ ಬೆಳಗಾವಿಯ ಸೈಬರ್ ಕ್ರೈಂ ಪೊಲೀಸರಿಗೆ ಆಘಾತಕಾರಿ ವಿಷಯ ಕಾದಿತ್ತು. ಗದಗನ ಮುನ್ಸಿಪಲ್ ಕಾಲೇಜ್ ನಲ್ಲಿ ನಡೆದ ಪರೀಕ್ಷೆಯಲ್ಲಿ ತಂದೆ-ಮಗ ಸೇರಿಕೊಂಡು ಪಶ್ನೆಪತ್ರಿಕೆ ಸೋರಿಕೆಗೆ ಕೈಜೋಡಿಸಿರುವ ವಿಷಯ ಬಹಿರಂಗವಾಗಿದೆ.ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಹಾಗೂ ಅವರ ಮಗ ಸಮೀತಕುಮಾರ್ ಕೈ ಚಳಕ ತೋರಿರುವ ಅಂಶ ಬೆಳಕಿಗೆ ಬಂದಿದ್ದು, ಇದೀಗ ಇಬ್ಬರನ್ನೂ ಬಂಧಿಸಿರುವ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.

ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು ಹೇಗೆ?:

ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಪಡೆದ ಉಪ ಪ್ರಾಚಾರ್ಯ ಮಾರುತಿ ಸೋನಾವನೆ

ಮಗ ಸಮೀತಕುಮಾರ್, ತನ್ನ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾನೆ. ಅಲ್ಲದೆ, ರಾಜ್ಯದ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೂ ಪ್ರಶ್ನೆ ಪತ್ರಿಕೆ ಕಳಿಸಿರುವ ಶಂಕೆ ವ್ಯಕ್ತವಾಗಿದೆ. ಸಮೀತ್ ಕುಮಾರನ ಮೊಬೈಲ್ ಗಾಗಿ ಪೊಲೀಸರು ಕಸ-ಕಂಟಿಗಳಲ್ಲೂ ತೀವ್ರ ಶೋಧ ನಡೆಸಿದ್ದಾರೆ. ಈ ಕುರಿತು ಪೊಲೀಸರು ಕಾಲೇಜು ಪ್ರಾಚಾರ್ಯ ಕುಲಕರ್ಣಿ ಅವರನ್ನು ವಿಚಾರಣೆ ನಡೆಸಿದ್ದು,ವಿಚಾರಣೆ ವೇಳೆ ಪ್ರಾಚಾರ್ಯರು ಕಣ್ಣೀರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

2022ರ ಆಗಸ್ಟ್ 7ರಂದು ಪ್ರಸ್ತುತ ಪರೀಕ್ಷೆ ನಡೆದಿದ್ದು, ಗದಗ-ಬೆಟಗೇರಿ ಅವಳಿ ನಗರದ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಇದೀಗ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಜಾಡು ಹಿಡಿದು ಬಂದ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸ್ ಇನ್ಸ್‌ಪೆಕ್ಟರ್ ವಿರೇಶ್  ದೊಡಮನಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಸೈಬರ್ ಕ್ರೈಂ ಪೊಲೀಸರು ತೀವ್ರ ಶೋಧಕಾರ್ಯ, ವಿಚಾರಣೆ ನಡೆಸಿದ್ದಾರೆ. ಈ ಕೃತ್ಯದ ಹಿಂದೆ ಇನ್ನೂ ಯಾರ್ಯಾರು ಶಾಮೀಲಾಗಿದ್ದಾರೆ ಎಂಬ ವಿಷಯ ತನಿಖೆಯ ನಂತರವಷ್ಟೇ  ತಿಳಿದುಬರಬೇಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News