ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ (S Nijalingappa) ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ , ಎನ್‌ಡಿ‌ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಬಿಜೆಪಿ , ಎನ್‌ಡಿ‌ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ!
ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ  (Waqf Board Amendment) ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು  ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.


ಇದನ್ನೂ ಓದಿ- ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ


ರಾಜ್ಯ ಅಭಿವೃದ್ಧಿ ಪಥಕ್ಕೆ ಅಡಿಗಲ್ಲು ಹಾಕಿದವರು ನಿಜಲಿಂಗಪ್ಪ: 
ಕರ್ನಾಟಕದ ಅಭಿವೃದ್ದಿ ಪಥಕ್ಕೆ (Karnataka Development Path) ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತಿಳಿಸಿದರು.


ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ  ಎಸ್ ನಿಜಲಿಂಗಪ್ಪ  (S Nijalingappa)ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ  ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.


ಇದನ್ನೂ ಓದಿ- ಬಿಜೆಪಿ ಪಾದಯಾತ್ರೆ... ಹೈಕೋರ್ಟ್‌ನಿಂದ ಮಹತ್ವದ ಆದೇಶ !


ಬಿ.ಕೆ. ಹರಿಪ್ರಸಾದ್ ಭೇಟಿ! 
ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದಷ್ಟೇ ಹೇಳಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.