ಬೆಂಗಳೂರು: ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ  ಭರವಸೆ ನೀಡಿದರು.


ಇದನ್ನೂ ಓದಿ: ಇನ್ನೊಂದು ವಾರದಲ್ಲಿ 3,500 ಪೊಲೀಸ್ ಕಾನ್‌ಸ್ಟೇಬಲ್‌ ನೇಮಕ: ಗೃಹ ಸಚಿವ ಡಾ.ಜಿ.ಪರಮೇಶ್ವರ್


ಬಜೆಟ್ ಮಂಡನೆಯಾಗಬೇಕಿದೆ.  ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು  ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ  ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು  ಕೆಂಪಣ್ಣ ಮನವಿ ಮಾಡಿದರು.


ಇದನ್ನೂ ಓದಿ: ಸಾವಿಗೆ ನ್ಯಾಯ ಸಿಗದ ಹಿನ್ನಲೆ ದಯಾಮರಣಕ್ಕೆ ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ


ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ.ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.