ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೃತಪಟ್ಟ 9 ಮಂದಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು ಮೂರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Last Updated : Sep 13, 2017, 02:03 PM IST
ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೃತಪಟ್ಟ 9 ಮಂದಿ title=
ಸಾಂದರ್ಭಿಕ ಚಿತ್ರ

ಉ.ಕನ್ನಡ: ಕಾರವಾರ ತಾಲ್ಲೂಕಿನ ಅರೆಬೈಲು ಘಟ್ಟದ ಬಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಕಾರು ಮತ್ತು ಹುಬ್ಬಳ್ಳಿಯಿಂದ ಅಂಕೋಲಾಕ್ಕೆ ತೆರೆಳುತ್ತಿದ್ದ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 

ಅಪಘಾತದಲ್ಲಿ ಮೂರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Trending News