ಉ.ಕನ್ನಡ: ಕಾರವಾರ ತಾಲ್ಲೂಕಿನ ಅರೆಬೈಲು ಘಟ್ಟದ ಬಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಕಾರು ಮತ್ತು ಹುಬ್ಬಳ್ಳಿಯಿಂದ ಅಂಕೋಲಾಕ್ಕೆ ತೆರೆಳುತ್ತಿದ್ದ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 


COMMERCIAL BREAK
SCROLL TO CONTINUE READING

ಅಪಘಾತದಲ್ಲಿ ಮೂರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.