ಬೆಂಗಳೂರು: ದಿನಾಂಕ 14.06.2023 ರಂದು ಬೆಂಗಳೂರು ಕೇಂದ್ರಿಯ ವಿಭಾಗದ ಘಟಕ-04 ರ ವಾಹನ ಸಂಖ್ಯೆ:ಕೆಎ-57 ಎಫ್ 3975, ಬೆಂಗಳೂರು- ತಿರುನಲ್ಲಾರ್ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿದ್ದಾಗ, ಆಸನ ಸಂಖ್ಯೆ 17 -18 ರಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕುಳಿತಿದ್ದ ವ್ಯಕ್ತಿ ಆಸನ ಸಂಖ್ಯೆ 29-30 ರಲ್ಲಿ ಕುಳಿತಿದ್ದ ಪ್ರಯಾಣಿಕ ದಂಪತಿಯು ಊಟಕ್ಕಾಗಿ ಕೆಳಗಿಳಿದಿದ್ದಾಗ ರೂ.5 ಲಕ್ಷ ಮೊತ್ತವನ್ನು ಕದ್ದಿದ್ದಾನೆ.


COMMERCIAL BREAK
SCROLL TO CONTINUE READING

ಇದೆ ವೇಳೆ ಎಲೆಕ್ಟ್ರಾನಿಕ್ ಸಿಟಿ ಸಿಗ್ನಲ್ ಬಳಿ ಇಳಿದು ಓಡಿಹೋಗುತ್ತಿದ್ದಾಗ, ಇದನ್ನು ಗಮನಿಸಿದ ನಿಗಮದ ವಾಹನ ಚಾಲಕರಾದ ಶ್ರೀ ಮಂಜುನಾಥ್, ಬಿಲ್ಲೆ ಸಂಖ್ಯೆ:566 ಹಾಗೂ ಚಾಲಕ ಕಂ ನಿರ್ವಾಹಕರಾದ ಶ್ರೀ ಸೋಮಪ್ಪ ಟಿ. ಎನ್, ಬಿಲ್ಲೆ ಸಂಖ್ಯೆ:6541 ರವರು ಸದರಿ ಪ್ರಯಾಣಿಕನನ್ನು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿ, ಶೌರ್ಯ ಮೆರೆದಿರುತ್ತಾರೆ. ಈ ಕುರಿತು ಹಣ ಕಳೆದುಕೊಂಡಿದ್ದ ಆಸನ ಸಂಖ್ಯೆ 29-30 ರ ಪ್ರಯಾಣಿಕರಾದ ಶ್ರೀ ತಿರುಮುರುಗನ್ ತಮ್ಮ ಹಣ ತಮಗೆ  ಸಿಕ್ಕ ಕುರಿತು ಅತೀವ ಸಂತಸ ವ್ಯಕ್ತಪಡಿಸಿ, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಇ-ಮೇಲ್ ಕಳುಹಿಸಿರುತ್ತಾರೆ.  


ಈ ಘಟನೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ  ಶ್ರೀ  ವಿ. ಅನ್ಬುಕುಮಾರ್, ಭಾ.ಆ.ಸೇ ರವರು ಸದರಿ ಸಿಬ್ಬಂದಿಗಳ ಸಮಯ ಪ್ರಜ್ಞೆ, ಧೈರ್ಯ, ಸಾಹಸ ಮತ್ತು ಪ್ರಯಾಣಿಕರ ಬಗೆಗಿನ ಕಾಳಜಿಯು ಪ್ರಶ್ನಾತೀತ.  ಇಂತಹ ಸಿಬ್ಬಂದಿಗಳೇ ನಮ್ಮ ಸಂಸ್ಥೆಯ ಹೆಮ್ಮೆ ಮತ್ತು ಗೌರವ. ಇವರ ಈ ಕಾರ್ಯವು ಇತರರಿಗೆ ಮಾದರಿಯಾಗಲಿ ಎಂದು ಆಶಿಸಿ ,ಇವರ  ಸಮಯೋಚಿತ ಸೇವಾ ಕಾರ್ಯಕ್ಕೆ ಹರ್ಷವನ್ನು ವ್ಯಕ್ತಪಡಿಸಿ ಅಭಿನಂದಿಸಿರುತ್ತಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ