ನಾಳೆ ಒಂದು ದಿನ ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವುದರಿಂದ ಮತ್ತು ಮಾನ್ಯ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿರುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.

Last Updated : Jan 11, 2023, 10:51 PM IST
  • ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವದಿಲ್ಲ,
  • ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ
  • ಮಾನ್ಯ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿರುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.
ನಾಳೆ ಒಂದು ದಿನ ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ title=
ಸಾಂದರ್ಭಿಕ ಚಿತ್ರ

ಧಾರವಾಡ : ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವುದರಿಂದ ಮತ್ತು ಮಾನ್ಯ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿರುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.

ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ದಿನಾಂಕ:12-01-2023 ರ ಗುರುವಾರದಂದು ಮಾತ್ರ ಒಂದು ದಿನ ರಜೆ ಘೋಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವದಿಲ್ಲ, ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News