ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ: ದಂಪತಿ ಪ್ರಾಣಾಪಾಯದಿಂದ ಪಾರು!

Heavy Rain Effect: ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.  

Written by - Savita M B | Last Updated : Nov 6, 2023, 12:14 PM IST
  • ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆ
  • ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ
  • ಘಟನೆ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.
ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ: ದಂಪತಿ ಪ್ರಾಣಾಪಾಯದಿಂದ ಪಾರು! title=

ರಿಪ್ಪನ್‌ಪೇಟೆ : ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು ಸಿಡಿಲಬ್ಬರದ ಧಾರಾಕಾರ ಮಳೆಗೆ ಹೆಚ್. ಕುನ್ನೂರು ಗ್ರಾಮದ ತಿಮ್ಮಪ್ಪ ಎಂಬುವವರ ಮನೆ ಮೇಲೆ ರಾತ್ರಿ 11 ರ ಸುಮಾರಿಗೆ ಮನೆ ಪಕ್ಕದಲ್ಲಿದ್ದ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದ್ದು ಈ ಘಟನೆಯಲ್ಲಿ ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿಗಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂಓದಿ-ಕೆ‌ಪಿ‌ಎಸ್‌ಸಿ ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆಸಿದ್ದು ದುರ್ನಡತೆಯ ಪರಮಾವಧಿ: ಜೆಡಿಎಸ್

ಈ ಘಟನೆಯಲ್ಲಿ ಮನೆಯಲ್ಲಿದ್ದ ಟಿವಿ ಸೇರಿದಂತೆ ದವಸ, ಧಾನ್ಯಗಳು, ಆಹಾರ ಪದಾರ್ಥಗಳು ಸೇರಿದಂತೆ ಇನ್ನಿತರ ವಸ್ತುಗಳು ನೀರುಪಾಲಾಗಿದ್ದು ಮನೆಗೆ ಹಾಕಿದ್ದ ಶೀಟ್, ಹೆಂಚುಗಳು ಸೇರಿದಂತೆ ಭಾಗಶಃ ಮನೆ ಜಖಂಗೊಂಡಿದೆ.

ಇದನ್ನೂಓದಿ-Weather Update: ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ.. ಗುಡುಗು ಮಿಂಚಿನ ಆರ್ಭಟ!

ವಿಷಯ ತಿಳಿಯುತ್ತಿದ್ದಂತೆ ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಸದಸ್ಯ ಮಂಜಪ್ಪ, ಪಿಡಿಒ ನಾಗರಾಜ್, ತಾಪಂ ಮಾಜಿ ಸದಸ್ಯ ಚಂದ್ರಮೌಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರದ ಕೊಡಿಸುವ ಭರವಸೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News