ಮಾರ್ಗ ಮಧ್ಯೆಯೇ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್; ವಿಡಿಯೋ ವೈರಲ್!!

ಬಸ್‌ ನಿಲ್ಲಿಸಿ ಡ್ರೈವರ್‌ ನಮಾಜ್‌ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕರ್ತವ್ಯದ ಅವಧಿಯಲ್ಲೇ ನಮಾಜ್‌ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Written by - Puttaraj K Alur | Last Updated : Apr 30, 2025, 07:39 PM IST
  • ಮಾರ್ಗ ಮಧ್ಯದಲ್ಲಿಯೇ ಬಸ್ ನಿಲ್ಲಿಸಿ ನಮಾಜ್ ಮಾಡಿದ ಕಂಡಕ್ಟರ್
  • ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ KSRTC ಬಸ್‌ನಲ್ಲಿ ನಮಾಜ್‌
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ವಿಡಿಯೋ
ಮಾರ್ಗ ಮಧ್ಯೆಯೇ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್; ವಿಡಿಯೋ ವೈರಲ್!!

Bus driver Namaz: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲು ಭಾರತವೂ ಸಜ್ಜಾಗಿದೆ. ಈಗಾಗಲೇ ಭಾರತೀಯ ಸೇನೆಗೆ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಹೀಗಾಗಿ ಪಾಪಿ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಮಾಡಬೇಕೆಂದು ದೇಶದ ಜನರು ಕಾಯುತ್ತಿದ್ದಾರೆ. ಈ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ಹಾವೇರಿ ಮಾರ್ಗ ಮಧ್ಯದಲ್ಲಿ ಕಂಡಕ್ಟರ್ ಕಂ ಡ್ರೈವರ್ ನಮಾಜ್ ಮಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್ ಆಗಿತ್ತು. 

Add Zee News as a Preferred Source

ಮಂಗಳವಾರ (ಏಪ್ರಿಲ್ 29) ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್‌ಅನ್ನ ಮಾರ್ಗ ಮಧ್ಯದಲ್ಲೇ ನಿಲ್ಲಿಸಿ ನಮಾಜ್‌ ಮಾಡಿದ್ದಾನೆ. ಬಸ್‌ನಲ್ಲಿ ಪ್ರಯಾಣಿಕರು ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದಾನೆ. ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ  ಈ ದೃಶ್ಯವನ್ನ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚಾಲಕನ ಈ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: 6ನೇ ದಿನವೂ ಪಾಕಿಗಳಿಂದ ಅಪ್ರಚೋದಿತ ಗುಂಡಿನ ದಾಳಿ

ಬಸ್‌ ನಿಲ್ಲಿಸಿ ಡ್ರೈವರ್‌ ನಮಾಜ್‌ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕರ್ತವ್ಯದ ಅವಧಿಯಲ್ಲೇ ನಮಾಜ್‌ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಸ್‌ನಲ್ಲಿ ನಮಾಜ್‌ ಮಾಡಿದ ಡ್ರೈವರ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಾವೇರಿ ಜಿಲ್ಲೆಯ ಜನರು ಆಗ್ರಹಿಸಿದ್ದಾರೆ. 

ಸರ್ಕಾರದ ಯೂನಿಫಾರ್ಮ್‌ ಧರಿಸಿದ ಸರ್ಕಾರಿ ಬಸ್ ನಿಲ್ಲಿಸಿ ನಮಾಜ್ ಮಾಡಿ ಧರ್ಮಕ್ಕೆ ಗೌರವ ಸಲ್ಲಿಸಿದ್ದ ವ್ಯಕ್ತಿ ಸರ್ಕಾರಕ್ಕೆ ಅವಮಾನ ಮಾಡಿದ್ದಾನೆ. ಸಮಯ ಮಿಸಲಿಡಲು ಇದು ಸಮುದಾಯದ ಜಾಗವಲ್ಲವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಾಜ್ ಮಾಡಲು ಇತರೆ ಸಮುದಾಯದ ಜನರ ಸಮಯ ಹಾಳು ಮಾಡಿ ಏನು ಸಾಧನೆ ಮಾಡಿದ್ರಿ? ಅಂತಾ ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. 

ಇದನ್ನೂ ಓದಿ: ರಾಜಧಾನಿಯಲ್ಲಿ ಆಫ್ರಿಕಾ ದೇಶದ 32 ರ ಹರೆಯದ ಮಹಿಳೆ ಮೃತದೇಹ ಪತ್ತೆ...! ಕೊಲೆ ಶಂಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News