ಶಿರಸಿ: ಪೊಲೀಸ್ ನೇಮಕಾತಿ ಹಗರಣದಲ್ಲಿ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನೆಲಮಾವ ಹೇರೂರು ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಘಟನೆಯಲ್ಲಿ ಗಣಪತಿ ಬಿ ಭಟ್  (55) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ. ಮೃತರು ಹೇರೂರೂ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


ಇದನ್ನೂ ಓದಿ : 72 ಲಕ್ಷ ರೂ ಕದ್ದ ಆರೋಪದ ಮೇಲೆ ಸೋನು ನಿಗಮ್ ತಂದೆಯ ಮಾಜಿ ಚಾಲಕನ ವಿರುದ್ಧ ಪ್ರಕರಣ


ಈ ಹಿಂದೆ ರಾಜ್ಯದಲ್ಲಿ ನಡೆದ ಅಕ್ರಮ ಪಿಎಸ್ಐ ನೇಮಕಾತಿ ಹಗರಣದಲ್ಲಿ ಇವರನ್ನ ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ಕೆಲ ದಿನಗಳ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು.ಬಳಿಕ ಅವರು ಊರಲ್ಲೆ ಉಳಿದು ಕೊಂಡಿದ್ದು, ಈಗಲ್ಲೂ ಸಹ ಆಗಾಗ ವಿಚಾರಣೆಗೆ ಹಾಜರಾಗುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ : ರಾಹುಲ್‌ ಗಾಂಧಿಗೆ ಜೈಲು ಶಿಕ್ಷೆ, ಅನರ್ಹ..! ಇದೇಲ್ಲಕ್ಕೂ ಕಾರಣ ಈ ಕರ್ನಾಟಕ ʼಬಿಜೆಪಿ ನಾಯಕ


ಯಾವುದೋ ವಿಚಾರವನ್ನ ಮನಸ್ಸಿಗೆ ಹಚ್ಚಿಕೊಂಡ ಜಿ ಬಿ ಭಟ್ ಅವರು ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.