ಹಿರಿಯ ವೈದ್ಯರ ಕಿರಕುಳದಿಂದ ಬೇಸತ್ತುಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ 

ಆಕೆ ಮಕ್ಕಳ ವೈದ್ಯೆಯಾಗುವ ಕನಸು ಹೊತ್ತು ದೂರದ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಳು. ತಂದೆಯನ್ನ ಕಳೆದುಕೊಂಡಿದ್ದ ಆಕೆ ಕೆಲಸದ ಒತ್ತಡ, ಹಿರಿಯ ವೈದ್ಯರ ಕಿರಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು.ಅಲ್ಲದೆ ತನ್ನ ಸ್ನೇಹಿತನ ಬಳಿ ಆತ್ಮಹತ್ಯೆ ಮಾಡಿಕೊಳ್ಳುವ ಮಾತು ಹೇಳಿ ಕೊನೆಗೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Written by - Manjunath N | Last Updated : Jun 5, 2023, 04:34 PM IST
  • ಇನ್ನೂ ಮಕ್ಕಳ ತಜ್ಞೆಯಾಗಿ ಉಚಿತ ಪ್ರವೇಶವನ್ನ ಪಡೆದಿದ್ದ ದರ್ಶಿನಿಗೆ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ.
  • ದಿನದ 48 ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾಗಿದ್ದು ಊಟಕ್ಕೂ ಸಹ ಬಿಡುತ್ತಿರಲಿಲ್ಲ ಎನ್ನಲಾಗಿದೆ.
  • ಜೊತೆಗೆ ಹಿರಿಯ ವೈದ್ಯ ಮಹೇಶ್ ಎಂಬಾತನ ಕಿರುಕುಳ ಹೆಚ್ಚಾಗಿದ್ದು, ಕಾಫಿ ಹೆಸರಿನಲ್ಲಿ ದರ್ಶಿನಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ.
 ಹಿರಿಯ ವೈದ್ಯರ ಕಿರಕುಳದಿಂದ ಬೇಸತ್ತುಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ  title=

ಕೋಲಾರ: ಆಕೆ ಮಕ್ಕಳ ವೈದ್ಯೆಯಾಗುವ ಕನಸು ಹೊತ್ತು ದೂರದ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಳು. ತಂದೆಯನ್ನ ಕಳೆದುಕೊಂಡಿದ್ದ ಆಕೆ ಕೆಲಸದ ಒತ್ತಡ, ಹಿರಿಯ ವೈದ್ಯರ ಕಿರಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು.ಅಲ್ಲದೆ ತನ್ನ ಸ್ನೇಹಿತನ ಬಳಿ ಆತ್ಮಹತ್ಯೆ ಮಾಡಿಕೊಳ್ಳುವ ಮಾತು ಹೇಳಿ ಕೊನೆಗೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ:  ಮಹಾಭಾರತದ ಶಕುನಿ ಮಾಮಾ ಎಂದೇ ಖ್ಯಾತರಾದ ಗುಫಿ ಪೈಂಟಲ್ ನಿಧನ

ಹೀಗೆ ಕಲ್ಲು ಕ್ವಾರಿ ನೀರಿನಲ್ಲಿ ಆತ್ಮಹತ್ಯೆಗೆ ಶರಣಾಗಿ ತೇಲುತ್ತಿರುವ ಮೆಡಿಕಲ್ ಸ್ಟೂಡೆಂಟ್ ಶವವನ್ನ ಹೊರ ತೆಗೆಯುತ್ತಿರುವ ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿ, ಮತ್ತೊಂದೆಡೆ ಎಂವಿಜೆ ಮೆಇಕಲ್ ಕಾಲೇಜು ಆಡಳಿತ ಮಂಡಳಿ ವಿರುದ್ದ ಆಕ್ರೋಶ ಹೊರ ಹಾಕುತ್ತಿರುವ ಮೃತಳ ಸಂಬಂಧಿಕರು, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರದಲ್ಲಿ, ಹೌದು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯರವ ಕಿರುಕುಳದ ಆರೋಪ ಕೇಳಿ ಬರುತ್ತಿದೆ.ನಿನ್ನೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ಕ್ವಾರಿಯಲ್ಲಿರುವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣಕ್ಕೆ ಸಭಂದಿಸಿದಂತೆ ಕಾಲೇಜಿ ಆಡಳಿತ ಮಂಡಳಿಯವರ ಕಿರುಕುಳ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಬಳ್ಳಾರಿ ಮೂಲದ 24 ವರ್ಷದ ದರ್ಶಿನಿ ಮಕ್ಕಳ ವೈದ್ಯೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿ ಕೊಪ್ಪಳದಲ್ಲಿ ಎಂಬಿಬಿಎಸ್ ಮುಗಿಸಿ, ಕಳೆದ ಏಳು ತಿಂಗಳ ಹಿಂದೆ ಹೊಸಕೋಟೆ ಬಳಿ ಇರುವ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ ವಿದ್ಯಾಭ್ಯಾಸಕ್ಕೆ ಆಗಮಿಸಿದ್ದಳು.ಇನ್ನೂ ಕಳೆದ ಎರಡು ವರ್ಷಗಳ ಹಿಂದೆ ತಂದೆಯನ್ನ ಕಳೆದುಕೊಂಡಿದ್ದ ವಿದ್ಯಾರ್ಥಿನಿ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದು ವೈದ್ಯಳಾಗಬೇಕೆಂಬ ಕನಸು ಹೊತ್ತಿದ್ದಳು. ಆದರೆ ನಿನ್ನೆ ಕೋಲಾರದ ಬಳಿ ಇರುವ ಕ್ವಾರಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ

ಇನ್ನೂ ಮಕ್ಕಳ ತಜ್ಞೆಯಾಗಿ ಉಚಿತ ಪ್ರವೇಶವನ್ನ ಪಡೆದಿದ್ದ ದರ್ಶಿನಿಗೆ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ. ದಿನದ 48 ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾಗಿದ್ದು ಊಟಕ್ಕೂ ಸಹ ಬಿಡುತ್ತಿರಲಿಲ್ಲ ಎನ್ನಲಾಗಿದೆ. ಜೊತೆಗೆ ಹಿರಿಯ ವೈದ್ಯ ಮಹೇಶ್ ಎಂಬಾತನ ಕಿರುಕುಳ ಹೆಚ್ಚಾಗಿದ್ದು, ಕಾಫಿ ಹೆಸರಿನಲ್ಲಿ ದರ್ಶಿನಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಆಡಳಿತ ಮಂಡಳಿಯವರ ಕಿರುಕುಳವನ್ನ ಪ್ರಶ್ನೆ ಮಾಡಿದ್ರೆ ಇಂಟರ್ನಲ್ ಮಾರ್ಕ್ ಕೊಡುವುದಿಲ್ಲ ಎಂಬ ಭಯದಿಂದ, ಮನೆಯವರಿಗೆ ಕಿರುಕುಳದ ಕುರಿತು ತಿಳಿಸದೆ, ಸ್ನೇಹಿತ ಮಣಿ ಎಂಬುವರ ಬಳಿ ತಮ್ಮ ಅಳಲನ್ನ ತೋಡಿಕೊಂಡಿದ್ದಳು. ಇನ್ನೂ ಆತ್ಮಹತ್ಯೆಗೂ ಮುನ್ನ ಸ್ನೇಹಿತ ಮಣಿಗೆ ಕರೆ ಮಾಡಿ ಘಟನೆಯನ್ನ ತಿಳಿಸಿ ಫೋನ್ ಕಟ್ ಮಾಡಿದ್ದಾಳೆ. ನಂತರ ಮಣಿಯ ಕರೆಗೂ ಸ್ಪಂದಿಸದೆ ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ದರ್ಶಿನಿ ಕಾಲೇಜಿನಿಂದ ಇಷ್ಟು ದೂರು ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ತಮ್ಮ ಅನುಮಾನ ವ್ಯಕ್ತಪಡಿಸಿದ್ದಾನೆ. ಘಟನೆಯ ವಿಚಾರವಾಗಿ ಆಡಳಿತ ಮಂಡಳಿ ಹಾಗೂ ಹಿರಿಯ ವೈದ್ಯನ ವಿರುದ್ದ ಪೋಷಕರು ದೂರು ನೀಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸರು ಐಪಿಸಿ ಸೆಕ್ಷನ್ ೩೦೬ ಹಾಗೂ ೩೪೫ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಒಟ್ನಲ್ಲಿ ಮಕ್ಕಳ ತಜ್ಞೆಯಾಗುವ ಆಸೆ ಹೊತ್ತಿದ್ದ ಮಗುವಿನಂತ ಮನಸ್ಸಿನ ದರ್ಶಿನಿಗೆ ತನ್ನ ವೃತ್ತಿ ಜೀವನದ ಕಷ್ಟ ಎದುರಿಸುವ ಶಕ್ತಿ ಇರಲಿಲ್ಲವೋ, ಕಾಲೇಜು ಆಡಳಿತ ಮಂಡಳಿ, ಹಿರಿಯ ವೈದ್ಯರ ಕಿರಕುಳ ಹೆಚ್ಚಾಗಿತ್ತೋ, ಮಾನಸಿಕವಾಗಿ ನೊಂದಿದ್ದ ದರ್ಶಿನಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ್ಲಾ, ಇಲ್ಲಾ ಯಾವುದೋ ಒತ್ತಡಕ್ಕೆ ಮಣಿದಳಾ ಹೀಗೆ ಹಲವು ಅನುಮಾನಗಳು ಮೂಡಿರುವುದಂತು ಸುಳ್ಳಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News