ಧಾರವಾಡ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ನಡೆಯುವ ದಿನದಂದು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 1,652 ಮತದಾನ ಕೇಂದ್ರಗಳಿಗೆ 1,268 ವೈದ್ಯಕೀಯ ತಂಡಗಳನ್ನು ನಿಯೋಜಿಸಿ, 1,850 ಪ್ರಥಮ ಚಿಕಿತ್ಸಾ ಕಿಟ್‍ಗಳನ್ನು ಅವಶ್ಯಕ ಔಷಧಿಗಳೊಂದಿಗೆ ಸಿದ್ಧಗೊಳಿಸಿ, ಪೂರೈಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೇ. 7 ರ ಮತದಾನ ದಿನದಂದು ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಹಾಗೂ ಮತದಾರರ ಆರೋಗ್ಯ ಕಾಳಜಿ, ಅಗತ್ಯವೆನಿಸಿದರೆ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಅವರ ನೇತೃತ್ವದಲ್ಲಿ ಅಗತ್ಯ ಸಿದ್ದತೆ, ಆರೋಗ್ಯ ಸಿಬ್ಬಂದಿಗಳ ನೇಮಕ ಮತ್ತು ಆಂಬ್ಯುಲೆನ್ಸಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ಮತಗಟ್ಟೆಗಳ ವೈದ್ಯಕೀಯ ಮೇಲ್ವಚಾರಣೆಗಾಗಿ 55 ಸೆಕ್ಟರಲ್ ಅಧಿಕಾರಿಗಳನ್ನು 10 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ.
ಮತದಾನದ ದಿನದಂದು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೇಂದ್ರ ಸ್ಥಾನವಾಗಿ ಇಟ್ಟು ಕೊಂಡು ಒಟ್ಟು 29 ಆಂಬ್ಯುಲೆನ್ಸ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮಸ್ಟರಿಂಗ ಮತ್ತು ಡಿಮಸ್ಟರಿಂಗ ದಿನದಂದು 8 ಕೇಂದ್ರಗಳಿಗೆ ವೈದ್ಯಕೀಯ ತಂಡಗಳೊಂದಿಗೆ ಆಂಬ್ಯುಲೆನ್ಸ ವಾಹನಗಳನ್ನು ನಿಯೋಜಿಸಲಾಗಿದೆ.
ಇದನ್ನು ಓದಿ : ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ, 50% DA ಬಳಿಕ ಇದೀಗ HRA ಮತ್ತು Gratuity ಲಾಭ!
ಬಿಸಿಗಾಳಿಯಿಂದ (Heat Wave Illness) ಉಂಟಾಗುವ ಅನಾರೋಗ್ಯ ನಿಯಂತ್ರಣಕ್ಕಾಗಿ ಮುಂಜಾಗೃತೆಯನ್ನು ವಹಿಸುವ ಕುರಿತು ಚುನಾವಣಾ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯವರಿಗೆ ತರಬೇತಿಯನ್ನು ನೀಡಲಾಗಿದೆ.
ಮತದಾನ ಕೇಂದ್ರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಓಆರ್‍ಎಸ್ ಪಾಕೇಟ್‍ಗಳನ್ನು ನೀಡಲಾಗಿದೆ.ಉಷ್ಣತೆಯಿಂದ ಸಂಭವಿಸುವ ಕಾಯಿಲೆಗಳಿಗೆ ಅಗತ್ಯವಿರುವ ಔಷಧಿಗಳ ದಾಸ್ತಾನುಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ತಾಲೂಕಾ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದೆ.ವಿಶೇಷ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ ಧಾರವಾಡದಲ್ಲಿ ಐದು ಹಾಸಿಗೆಗಳನ್ನು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ ಎರಡು ಹಾಸಿಗೆಗಳನ್ನು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಒಂದು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ಮತದಾನ ಕೇಂದ್ರಕ್ಕೂ ಬಿಸಿಗಾಳಿ, ಬಿಸಲಿನಿಂದ ರಕ್ಷಿಸಿಕೊಳ್ಳಲು (Heat Wave Illness) ಕೈಕೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ವಹಿಸಿಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಕರಪತ್ರಗಳನ್ನು ವಿತರಿಸಲಾಗಿದೆ.ಮತ್ತು ಸ್ವಿಪ್ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಯವರಿಗೆ ಸೂಚಿಸಲಾಗಿದೆ.ಒಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ಚುನಾವಣಾ ಕಾರ್ಯನಿರತ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಲು ಎಲ್ಲ ಅವಶ್ಯಕ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಮತಗಟ್ಟೆಗೆ ಬರುವ ಮತದಾರನ ಮತ್ತು ಚುನಾವಣಾ ಕರ್ತವ್ಯನಿರತ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯ ಸಂರಕ್ಷಣೆಗೆ ವಿಶೇಷ ಆದ್ಯತೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನ ದಿನದಂದು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹಾಗೂ ಮತಗಟ್ಟೆಗೆ ಬರುವ ಮತದಾರರ ಆರೋಗ್ಯ ರಕ್ಷಣೆಗಾಗಿ ಈಗಾಗಲೇ ದೈನಂದಿನ ಬಳಕೆಯ ಔಷಧಿಗಳನ್ನು ಒಳಗೊಂಡ ವಿಶೇಷ ಆರೋಗ್ಯ ಕಿಟ್ ಸಿದ್ದಪಡಿಸಿರುವ ಜಿಲ್ಲಾಡಳಿತ, ಪ್ರಸ್ತುತ ಸಿಬ್ಬಂದಿಗಳ ಆರೋಗ್ಯದ ವಿಷಯದಲ್ಲೂ ಸಹ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿದ್ದು, ಇದಕ್ಕಾಗಿ ತುರ್ತು ಬಳಕೆಗೆ ಅವಶ್ಯಕವಿರುವ ಅಗತ್ಯ ಔಷಧಗಳನ್ನು ಹೊಂದಿರುವ ಔಷಧಿ ಕಿಟ್‍ಗಳನ್ನೂ ಸಿದ್ದಪಡಿಸಿ ನೀಡಿದೆ.
ಇದನ್ನೂ ಓದಿ: ಕೋವಾಕ್ಸಿನ್ ಅತ್ಯುತ್ತಮ ಸುರಕ್ಷತಾ ದಾಖಲೆಯನ್ನು ಹೊಂದಿದೆ : ಭಾರತ್ ಬಯೋಟೆಕ್
ಪ್ರಸ್ತುತದಲ್ಲಿ ರಾಜ್ಯಾದ್ಯಂತ ಉಷ್ಣ ವಾತಾವರಣ ಹೆಚ್ಚಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳು ಮತಗಟ್ಟೆಗಳಿಗೆ ತಲುಪಿದ ಮೇಲೆ ಮತ್ತು ಮತದಾನದ ದಿನದಂದು ಯಾವುದೇ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಓಆರ್‍ಎಸ್ ಪಾಕೇಟ್‍ಗಳು, ಜ್ವರ, ತಲೆನೋವು, ಹೊಟ್ಟೆನೋವು, ವಾಂತಿ, ಆಸಿಡಿಟಿ ಮುಂತಾದ ಸಮಸ್ಯೆಗಳಿಗೆ ಒಳಗಾದಲ್ಲಿ ಅವುಗಳ ಪರಿಹಾರಕ್ಕಾಗಿ ಅಗತ್ಯವಿರುವ ಮಾತ್ರೆಗಳು, ಸ್ಯಾನಿಟೈಸರ್, ಸಣ್ಣ ಪುಟ್ಟ ಗಾಯಗಳಾದಲ್ಲಿ ಬ್ಯಾಂಡ್ ಏಡ್‍ನ್ನು ಒಳಗೊಂಡ ಕಿಟ್‍ನ್ನು ಸಿದ್ದಪಡಿಸಿದ್ದು, ಮಸ್ಟರಿಂಗ್ ದಿನದಂದು ಚುನಾವಣಾ ಸಾಮಗ್ರಿಗಳ ಜೊತೆಗೆ ಇದನ್ನು ವಿತರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಚುನಾವಣಾ ಸಿಬ್ಬಂದಿಗೆ ನೀಡಲಾಗುವ ಆರೋಗ್ಯ ಕಿಟ್‍ನಲ್ಲಿರುವ ಮಾತ್ರೆಗಳು ಹೆಸರು ಮತ್ತು ಅದನ್ನು ಯಾವ ಅನಾರೋಗ್ಯ ಸಂಬಂಧಿತ ಸಮಸ್ಯೆಗೆ ಬಳಸಬೇಕು ಎನ್ನುವ ಬಗ್ಗೆ ಸಹ ವಿವರಗಳನ್ನು ನೀಡಿದ್ದು, ಮತಗಟ್ಟೆಯಲ್ಲಿರುವ ಯಾವುದೇ ಸಿಬ್ಬಂದಿ ಸುಲಭವಾಗಿ ಮಾತ್ರೆಗಳನ್ನು ಗುರುತಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.
ಅಲ್ಲದೇ ಮತದಾನದ ದಿನದಂದು ಯಾವುದೇ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಹಾಗೂ ಮತದಾರರಿಗೆ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗಳು ಸದಾ ಲಭ್ಯವಿರುವಂತೆ ಸೂಚನೆ ನೀಡಲಾಗಿದ್ದು, ಅಗತ್ಯ ಬಿದ್ದಲ್ಲಿ ತುರ್ತು ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಅನುಕೂಲವಾಗುವಂತೆ ಆಂಬ್ಯುಲೆನ್ಸಗಳನ್ನು ಸಿದ್ದತೆಯಲ್ಲಿಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತದಾರರಿಗೆ, ಮತಗಟ್ಟೆ ಸಿಬ್ಬಂದಿಗಳಿಗೆ ಮತಗಟ್ಟೆಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕುಡಿಯುವ ನೀರು ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
ಚುನಾವಣಾ ಕಾರ್ಯದಲ್ಲಿ ಮತದಾನವು ಅತ್ಯಂತ ಬಹುಮುಖ್ಯ ಘಟ್ಟ. ಮತದಾನದ ದಿನದಂದು ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣಾ ಸಿಬ್ಬಂದಿಗಳು ಆರೋಗ್ಯಕರವಾಗಿ ಮತ್ತು ಉತ್ಸಾಹದಿಂದ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಜಿಲ್ಲಾಡಳಿತದ ಮೂಲಕ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದು, ಸಿಬ್ಬಂದಿಗಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಇದನ್ನೂ ಓದಿ: ಕೋವಾಕ್ಸಿನ್ ಅತ್ಯುತ್ತಮ ಸುರಕ್ಷತಾ ದಾಖಲೆಯನ್ನು ಹೊಂದಿದೆ : ಭಾರತ್ ಬಯೋಟೆಕ್
ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಿರುವ ಕಾರಣ ಕರ್ತವ್ಯ ನಿರತ ಸಿಬ್ಬಂದಿಗಳ ದೇಹದಲ್ಲಿ ನಿರ್ಜಲೀಕರಣ ಉಂಟಾಗದಂತೆ ಓಆರ್‍ಎಸ್ ಪಾಕೆಟ್‍ಗಳನ್ನು ವಿತರಿಸಲಾಗುತ್ತಿದ್ದು, ಇದನ್ನು ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಸಾಧ್ಯವಾಗಲಿದೆ.ಹಿಂದಿನ ಲೋಕಸಭೆ ಚುನಾವಣೆಗಳಿಗಿಂತ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತದಾರ ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಆರೋಗ್ಯ ಕಿಟ್ ದಲ್ಲಿ ಇರುವ ಔಷಧಿಗಳು: ಶೀತ, ನೆಗಡಿ, ಅಲರ್ಜಿಗಾಗಿ ಸಿಟ್ರಿಜಿನ್ ಹೈಡ್ರೊಕ್ಲೋರೈಡ್ (Cetrizine Hydrochloride 10mg) ಟ್ಯಾಬ್ಲೆಟ್ ಅಥವಾ ಕ್ಲೋರ್ಫೆನಿರಮೈನ್ ಮಲೇಟ್ 4ಎಂಜಿ ಟ್ಯಾಬ್ಲೆಟ್ ಮತ್ತು ಮೈಕೈನೋವಿಗೆ ಡಿಕ್ಲೋಫೆನಾಕ್ 5ಎಂಜಿ ಟ್ಯಾಬ್ಲೆಟ್, ವಾಂತಿಗೆ ಡೊಂಪೆರಿಡೋನ್ 10ಎಂಜಿ ಟ್ಯಾಬ್ಲೆಟ್ (ಊಟಕ್ಕೆ ಮೊದಲು), ಜ್ವರ, ಮೈಕೈನೋವಿಗೆ ಪ್ಯಾರಾಸಿಟಿಮಾಲ್ 650ಎಂಜಿ ಟ್ಯಾಬ್ಲೆಟ್, ದಮ್ಮು ಅಸ್ತಮಾ ರೋಗಕ್ಕೆ ಥಿಯೋಫಿಲಿನ್ ಮತ್ತು ಎಟೋಫಿಲಿನ್ 23ಎಂಜಿ ಮತ್ತು 77ಎಂಜಿ ಟ್ಯಾಬ್ಲೆಟ್, ಅಸಿಡಿಟಿಗೆ ಒಮೆಪ್ರಜೋಲ್ ಕ್ಯಾಪ್ಸುಲಾ 20ಎಂಜಿ ಟ್ಯಾಬ್ಲೆಟ್ (ಊಟಕ್ಕೆ ಮೊದಲು), ಅತಿಸಾರಭೇದಿ ಮತ್ತು ವಾಂತಿಗೆ ಓರಲ್ ರೀಹೈಡ್ರೇಶನ್ ಸಾಲ್ಟ್ಸ್ ಪೌಡರ್, ಹೀರಿಕೊಳ್ಳುವ ಹತ್ತಿ ಉಣ್ಣೆ, ಬ್ಯಾಂಡೇಜ್ ಬಟ್ಟೆ, ಅತಿಸಾರಭೇದಿಗೆ ಆಫೆÇ್ಲೀಕ್ಸಾಸಿನ್ 200ಎಂಜಿ ಐಪಿ ಟ್ಯಾಬ್ಲೆಟ್, ಗಾಯಕ್ಕೆ ಆಯೋಡಿನ್ ಮುಲಾಮು ಮುಂತಾದವುಗಳನ್ನು ಆರೋಗ್ಯ ಕಿಟ್‍ದಲ್ಲಿ ಇಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಅವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.