ಬೆಂಗಳೂರು: ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದ ಕಳೆದ ಆಗಸ್ಟ್–ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆ -2ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಿಕ್ಷಣ ಮುಂದುವರೆಸುವ ಅರ್ಹತೆ ಪಡೆದುಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಪರೀಕ್ಷಾ ವ್ಯವಸ್ಥೆಯಲ್ಲಿ ಮಾಡಿರುವ ಮಹತ್ವದ ಬದಲಾವಣೆ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ನಾಡಿನ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಿಮುಖನಾಗದೆ ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶಕ್ಕೆ ದೊರೆತಿರುವ ಈ ಆರಂಭಿಕ ಯಶಸ್ಸು ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿಯಾಗಲಿದೆ’ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸಂಪುಟದ ಗೂಂಡಾಗಿರಿ ಸಚಿವರ ಪಟ್ಟಿ..!


‘SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ವರ್ಷಕ್ಕೊಮ್ಮೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆ ನಡೆಸಲಾಗುತ್ತಿತ್ತು. ಇದು ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡವನ್ನು ಹೆಚ್ಚಿಸಿ, ಅವರ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತಿತ್ತು. ಜೊತೆಗೆ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮತ್ತೊಂದು ವರ್ಷ ಕಾಯಲಾಗದೆ ಶಿಕ್ಷಣ ಮೊಟಕುಗೊಳಿಸುತ್ತಿದ್ದ ಉದಾಹರಣೆಗಳು ಸಾಕಷ್ಟಿದ್ದವು’ ಎಂದು ಹೇಳಿದ್ದಾರೆ.


ಕಾವೇರಿ ನೀರು: ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು- ಎಚ್‌ಡಿ‌ಕೆ

ವರ್ಷಕ್ಕೆ 3 ವಾರ್ಷಿಕ ಪರೀಕ್ಷೆ!


ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿನಿಂದ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲಾಗಿದೆ. ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ 1 ವಾರ್ಷಿಕ ಪರೀಕ್ಷೆ ಮತ್ತು 1 ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆ ವಿದ್ಯಾರ್ಥಿಗಳ ಮೇಲೆ ಹಚ್ಚು ಒತ್ತಡ ಮತ್ತು ಆತಂಕವನ್ನುಂಟು ಮಾಡುತ್ತಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವರ್ಷಕ್ಕೆ 3 ವಾರ್ಷಿಕ ಪರೀಕ್ಷಾ ನಿಯಮವನ್ನು ಜಾರಿ ಮಾಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.