CM BSY : ಸಂಪುಟ ವಿಸ್ತರಣೆಗೆ ಸಿಗಲಿದೆಯಾ ಅನುಮತಿ ? ಕುತೂಹಲ ಕೆರಳಿಸಿದ ಸಿಎಂ ದೆಹಲಿ ಭೇಟಿ
ಸಾಕಷ್ಟುಕುತೂಹಲ ಕೆರಳಿಸಿದೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ. ವರಿಷ್ಠರ ಜೊತೆ ಚರ್ಚೆ ನಂತರ ಇಂದೇ ಬೆಂಗಳೂರಿಗೆ ವಾಪಸಾಗಲಿರುವ ಬಿಎಸ್ ವೈ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಅನ್ನೋ ಪ್ರಶ್ನೆ ಸದ್ಯ ಎಲ್ಲರನ್ನೂ ಕಾಡುತ್ತಿದೆ. ಸಚಿವ ಸ್ಥಾನ ಆಕಾಂಕ್ಷಿಗಳು ಸಂಪುಟವಿಸ್ತರಣೆಗೆ ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.
ಸಂಪುಟ ವಿಸ್ತರಣೆಗೆ ಸಿಗಲಿದೆಯೇ ಅನುಮತಿ:
ಬೆಳಿಗ್ಗೆ 8.20ರ ವಿಮಾನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ (B S Yadiyurappa) ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಪಕ್ಷದವರಿಷ್ಠರೊಂದಿಗೆ ಚರ್ಚೆ ನಡಸಲಿದ್ದಾರೆ. ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಿಗೆ ಶೀಘ್ರದಲ್ಲೇ ಉಪಚುನಾವಣೆ (By-Election) ಘೋಷಣೆಯಾಗುವ ಸಂಭವವಿದೆ. ಒಂದು ವೇಳೆ ಚುನಾವಣೆ ಘೋಷಣೆಯಾದಲ್ಲಿ ಸಚಿವ ಸಂಪುಟ ವಿಸ್ತರಣೆ 2 ತಿಂಗಳು ವಿಳಂಬವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗುವ ಮೊದಲೇ ಸಂಪುಟ ವಿಸ್ತರಣೆ (Cabine Expansion) ಕೈಗೊಳ್ಳುವ ಚಿಂತನೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪಇದ್ದಾರೆ. ಹಾಗಾಗಿ ಇಂದಿನ ಸಭೆಯಲ್ಲಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯುವ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ : H.D.Kumaraswamy: 'ಸಿಎಂ ಬಿಎಸ್ ವೈಗೆ ಅಭಿನಂದನೆಗಳು ಹೇಳಿದ ಮಾಜಿ ಸಿಎಂ'
ಸಂಪುಟ ವಿಸ್ತರಣೆಯೋ? ಅಥವಾ ಸಂಪುಟ ಪುನಾರಚನೆಯೋ :
ಇಂದು ದೆಹಲಿ ಭೇಟಿ ವೇಳೆ ಸಿಎಂ ಬಿಎಸ್ ವೈ ಜೆ.ಪಿ.ನಡ್ಡಾ (J P Nadda) ಅರುಣ್ ಸಿಂಗ್ ಅವರನ್ನು ಭೇಟಿ ಮಾಡುವ ಸಂಭವವಿದೆ. ಅಮಿತ್ ಶಾ (Amith Shah) ಅವರೊಂದಿಗೂ ಚರ್ಚಿಸಿ ಇಂದು ರಾತ್ರಿಯೇ ಬೆಂಗಳೂರಿಗೆ (Bengaluru) ವಾಪಸ್ ಆಗುವ ನಿರೀಕ್ಷೆಯಿದೆ. ಈ ಬಾರಿ ಸಂಪುಟ ವಿಸ್ತರಣೆಯಾಗಲಿದೆಯೇ, ಅಥವಾ ಪುನಾರಚನೆ ಆಗಲಿದೆಯೇ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ಪ್ರಶ್ನೆಗೆ ವರಿಷ್ಠರೊಂದಿಗಿನ ಚರ್ಚೆ ಬಳಿಕವಷ್ಟೇ ಉತ್ತರ ಸಿಗಲಿದೆ.
ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಗ್ಗೆಯೂ ಚರ್ಚೆ:
ಒಂದು ಲೋಕಸಭಾ (Loksabha) ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ವಿಚಾರವೂ ಇಂದಿನ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಉಪ-ಚುನಾವಣೆಗಳಿಗೆ ಅಭ್ಯರ್ಥಿಗಳಾಗಲು ಬಿಜೆಪಿಯಲ್ಲಿ (BJP) ಭಾರೀ ಫೈಟ್ ಏರ್ಪಟ್ಟಿದೆ. ಉಪ-ಚುನಾವಣೆಗಳಿಗೆ ಸದ್ಯದಲ್ಲೇ ದಿನಾಂಕ ಘೋಷಣೆಯಾಗುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ವಿಚಾರವನ್ನೂ ಸಿಎಂ ಇತ್ಯರ್ಥ ಮಾಡಿಕೊಂಡು ಬರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಗ್ರಾಮೀಣಾಭಿವೃದ್ಧಿ ವಿವಿಯಿಂದ ಸರಕಾರಿ ಶಾಲೆಗಳ ದತ್ತು ಸ್ವೀಕಾರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.