ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಈಗ ಏಕಾಏಕಿ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾನೆ.
ಮೃತಪಟ್ಟಿರುವ ಶಿಕ್ಷನನನ್ನು ಮೂಲತಃ ರಾಯಚೂರು ಜಿಲ್ಲೆಯ ಸಿಂಧೂನೂರು ಪಟ್ಟಣದ ಶಂಕರಪ್ಪ ಬೋರಡ್ಡಿ (47) ಎನ್ನಲಾಗಿದೆ.ಅವರು ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಮಕ್ಕಳಿಗಾಗಿ ಆಟದ ಮೈದಾನ ರಕ್ಷಿಸಿ ಕೊಟ್ಟ ಮಾಜಿ ಶಾಸಕ ರಾಜಣ್ಣ
ಮಂಗಳವಾರದಂದು ಅವರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಶಿಕ್ಷಕರ ಸದನದಲ್ಲಿ ತಂದಿದ್ದರು.ಬಳಿಕ ರೂಂ ನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಈ ಘಟನೆ ಬುಧುವಾರ ಮಧ್ಯರಾತ್ರಿ ನಡೆದಿದ್ದು, ನಿನ್ನೆ ತಡ ರಾತ್ರಿ ಮೃತರ ಊರಿಗೆ ಮೃತದೇಹ ರವಾನೆ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.