New Year celebrations Guidelines in Mangaluru: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿಯನ್ನು ಹೊರಡಿಸಿದೆ. ನೋಂದಾಯಿತ ಮತ್ತು ಅಧಿಕೃತ ಕ್ಲಬ್‌, ಪಬ್‌, ರೆಸ್ಟೋರೆಂಟ್‌, ಹೊಟೇಲ್‌ಗಳಿಗೆ ಈ ನಿಯಮಗಳು ಅನ್ವಯವಾಗುತ್ತವೆ. ರಾತ್ರಿ 12.30 ರವರೆಗೆ ಮಾತ್ರ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Namma Metro Service Extension on New Year: ಹೊಸ ವರ್ಷಾಚರಣೆಗೆ ‘ನಮ್ಮ ಮೆಟ್ರೋ’ದಿಂದ ಗಿಫ್ಟ್: ರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಿಸಿದ BMRCL


ಸುಪ್ರೀಂ ಕೋರ್ಟ್‌ ಆದೇಶದಂತೆ ಧ್ವನಿವರ್ಧಕ, ವಿದ್ಯುನ್ಮಾನ ಉಪಕರಣಗಳು, ಶಬ್ದ ಉಂಟು ಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆಯಬೇಕಾಗಿದೆ.


ಮಾರ್ಗಸೂಚಿ ಹೇಗಿದೆ ತಿಳಿದುಕೊಳ್ಳೋಣ:


ಸಭಾಂಗಣ, ತೆರೆದ ಸ್ಥಳ, ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾಭವನ, ಕಡಲ ತೀರ, ಹೋಂ ಸ್ಟೇ, ಮಾಲ್‌ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ ಮತ್ತು ಡಾಲ್ಟಿ ಡ್ಯಾನ್ಸ್‌ಗಳನ್ನು ನಡೆಸುವಂತಿಲ್ಲ.


ವಿಶೇಷ ಪಾರ್ಟಿ ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್‌ ಇಲಾಖೆಯ ಅನುಮತಿ ಪಡೆಯಬೇಕು.


ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇಲ್ಲ. ಆದರೆ ಈ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ಮೇಲ್ವಿಚಾರಕರು ಅಥವಾ ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶಗಳಿಗೆ ಮತ್ತು ಸರಕಾರದ ನಿಯಮಗಳನ್ನು ಪಾಲಿಸಬೇಕು


ದಿನನಿತ್ಯ ನಡೆಯುವ ಕ್ಲಬ್‌, ಪಬ್‌, ರೆಸ್ಟೋರೆಂಟ್‌ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್‌ನಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು


ಈಗಾಗಲೇ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್‌ ಇಲಾಖೆ, ಪಾಲಿಕೆಯ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳ ಗಸ್ತು ಪಡೆಯನ್ನು ಭದ್ರತಾ ದೃಷ್ಟಿಯಿಂದ ನಿಯೋಜಿಸಲಾಗಿದೆ.


ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಗ್ರೀನ್‌ ಸಿಗ್ನಲ್‌.. ಸದನದಲ್ಲಿ ಸಚಿವ ಕಾರಜೋಳ ಹರ್ಷ


ಇನ್ನು ಈ ಸಂಬಂಧ ಸಭೆ ನಡೆಸಿರುವ ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಮತ್ತು ಪೊಲೀಸ್‌ ಆಯುಕ್ತ ಶಶಿಕುಮಾರ್‌, ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಹೋಟೆಲ್‌, ಪಬ್‌, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.