ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ಮಹತ್ವದ ಸಭೆ ಆರಂಭ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ವಿಚಾರವಾಗಿ ಶನಿವಾರ ವಿಧಾನಸೌಧದಲ್ಲಿ ತಜ್ಞರ ನೇತೃತ್ವದ ಸಮಿತಿ ಸಭೆ ನಡೆಯುತ್ತಿದೆ.
ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ಇದು ಸಮಿತಿಯ ಮೊದಲ ಸಭೆಯಾಗಿದೆ. ಸಮಿತಿ ಅಧ್ಯಕ್ಷ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಆಗ್ರಹಿಸಿದ್ದ ಲಿಂಗಾಯತ ಸಮುದಾಯದ ನಾಯಕರು, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧಿಸಿದ್ದ ವೀರಶೈವ ಸಮುದಾಯದ ಮುಖಂಡರು ಭಾಗವಹಿಸಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಮಾನ್ಯತೆ ಕೊಡಬೇಕೆ, ಬೇಡವೇ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.