ಇಂದಿನಿಂದ ಮೂರು ದಿನ ಜಲಸಂಪನ್ಮೂಲ ಇಲಾಖೆ ಮತ್ತು ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ
ಸಭೆಯಲ್ಲಿ ನಾಲ್ಕು ನೀರಾವರಿ ನಿಗಮಗಳಿಗೆ ಸಂಬಂಧಿಸಿದ ಯೋಜನೆಗಳ ಪ್ರಗತಿ ಪರಿಶೀಲನೆ, ಅಂತರರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ಮಾಹಿತಿಗಳ ಚರ್ಚೆ, ಕಾಡಾ ಯೋಜನೆಗಳ ಪ್ರಗತಿ, ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.
ಬೆಂಗಳೂರು: ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಇಂದಿನಿಂದ ಮೂರು ದಿನ ಜಲಸಂಪನ್ಮೂಲ ಇಲಾಖೆ ಮತ್ತು ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಈ ಸಭೆಯಲ್ಲಿ ನಾಲ್ಕು ನೀರಾವರಿ ನಿಗಮಗಳಿಗೆ ಸಂಬಂಧಿಸಿದ ಯೋಜನೆಗಳ ಪ್ರಗತಿ ಪರಿಶೀಲನೆ, ಅಂತರರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ಮಾಹಿತಿಗಳ ಚರ್ಚೆ, ಕಾಡಾ ಯೋಜನೆಗಳ ಪ್ರಗತಿ, ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.
ಎತ್ತಿನಹೊಳೆ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತ್ತು ತುಂಗಭದ್ರಾ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ರೈತರು ಮತ್ತು ಆಯಾ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೂ ಮಹತ್ವದ ಸಭೆ ನಡೆಯಲಿದೆ.
ವಿಕಾಸ ಸೌಧದಲ್ಲಿ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಪ್ರಗತಿ ಪರಿಶೀಲನಾ ಸಭೆಗಳು ನಡೆಯಲಿವೆ. ಸರ್ಕಾರದ ಕೋವಿಡ್ ನಿರ್ವಹಣೆಯ ಮಾರ್ಗಸೂಚಿಯಂತೆ ಸಭೆಗಳು ನಡೆಯಲಿದ್ದು, 3 ದಿನಗಳ ಸಭೆಯ ಮುಕ್ತಾಯದ ಬಳಿಕ ಜಲಸಂಪನ್ಮೂಲ ಸಚಿವರು ಮಾಧ್ಯಮಗಳಿಗೆ ಮಾಹಿತಿ ಒದಗಿಸಲಿದ್ದಾರೆ.