ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನ ಪಂಡರವಳ್ಳಿ ಬಳಿ ನಡೆದಿದೆ.
ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ಹುಲಿ ದಾಳಿ ಮಾಡಿದೆ. ಅಸ್ಸಾಂ ಮೂಲದ ಕಾರ್ಮಿಕ ಮಹಿಳೆಯ ಮುಖ ಹಾಗೂ ಹಣೆಯ ಮೇಲೆ ಗಂಭೀರ ಗಾಯವಾಗಿದೆ. ಕೂಡಲೇ ಕಾಫಿ ತೋಟದಲ್ಲಿದ್ದ ಇತರೆ ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಕಾಫಿ ತೋಟದಲ್ಲಿ ಕಣ್ಮರೆಯಾಗಿದೆ. ಹುಲಿ ಹೋಗುತ್ತಿದ್ದಂತೆ ಕಾರ್ಮಿಕರು ಮಹಿಳೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಹುಲಿಯನ್ನು ಸೆರೆ ಹಿಡಿಯುವ ಭರವಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸಂಸದರು ಶಾಸಕರ ಜೊತೆ ಡಿಸಿಎಂ ಡಿಕೆ ಸುದೀರ್ಘ ಚರ್ಚೆ..!
ಕಳೆದ ಐದಾರು ವರ್ಷಗಳ ಹಿಂದೆ ಕೂಡ ಇದೇ ಪಂಡರವಳ್ಳಿ ಗ್ರಾಮದಲ್ಲಿ ಹುಲಿ ದಾಳಿಗೆ ಸ್ಥಳೀಯ ಕಾರ್ಮಿಕ ಮಹಿಳೆ ಬಲಿಯಾಗಿದ್ದರು. ಹುಲಿಗಾಗಿ ಬೋನಿಟ್ಟು ನಾಲ್ಕೈದು ದಿನಗಳ ಕಾಲ ಕಾದು ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದರು. ಚಿಕ್ಕಮಗಳೂರಿನಲ್ಲಿ ಸೆರೆಹಿಡಿದ ಹುಲಿಯನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಬಿಟ್ಟಿದ್ದರು. ಆದರೆ, ಆ ಹುಲಿ ಖಾನಾಪುರದಲ್ಲೂ ಕೂಡ ಮಹಿಳೆಯನ್ನು ಬಲಿ ಪಡೆದಿತ್ತು. ಬಳಿಕ ನರಹಂತಕನಾಗಿದ್ದ ವ್ಯಾಘ್ರನನ್ನ ಕೋರ್ಟ್ ಸೂಚನೆ ಮೇರೆಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಇದೀಗ ಮತ್ತೆ ಪಂಡರವಳ್ಳಿಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.