ಬೆಂಗಳೂರು: ವಿದ್ಯಾರ್ಥಿನಿಯೊಬ್ಬರು  ಹಾಸ್ಟೇಲ್ ನ ಆರನೇ  ಮಹಡಿಯಿಂದ ಬಿದ್ದು ಸಾವನಪ್ಪಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಲ್ಲು ತೂರಟ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಮೃತ ಯುವತಿಯನ್ನು ಉಗಾಂಡ ದೇಶದ ಆಸಿನಾ ಉವಾಸೆ (22 ವರ್ಷ) ಎಂದು ಗುರುತಿಸಲಾಗಿದ್ದು, ಈಕೆ ಬಿಬಿಎ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದು ಬಂದಿದೆ. 


ಇದನ್ನೂ ಓದಿ- ಭಾಷೆ ಕಿರಿಕ್: ವಿದ್ಯಾರ್ಥಿಗಳ ನಡುವೆ ಸಂಘರ್ಷ


ವಿದ್ಯಾರ್ಥಿನಿ ಆಸಿನಾ ಉವಾಸೆ ನಿನ್ನೆ ರಾತ್ರಿ  ಒಣಗಿಸಲು ಹಾಕಿದ್ದ ಬಟ್ಟೆಯನ್ನು ತರಲು ಆರನೇ  ಮಹಡಿಯನ್ನು ಹತ್ತಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ. ಆದರೆ ಈ ಘಟನೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯೇ ಕಾರಣವೆಂದು ಕೆರಳಿದ ವಿದ್ಯಾರ್ಥಿಗಳು ದಾಂದಲೆ ಎಬ್ಬಿಸಿದ್ದು, ಕಲ್ಲು ತೂರಾಟ ನಡೆಸಿ‌ ಕಿಡಿಕಿಗಾಜುಗಳನ್ನು ಒಡೆದಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಡಿವೈಎಸ್ಪಿ ನಾಗರಾಜ್, ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. 


ಇದನ್ನೂ ಓದಿ- ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ


ಕಳೆದ ಮೂರು ದಿನಗಳ ಹಿಂದಷ್ಟೇ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ವಿದ್ಯಾರ್ಥಿಗಳು ಪೊಲೀಸ್ ಠಾಣೆ ಮೇಟ್ಟಿಲೇರಿ ಸುದ್ದಿಯಾಗಿದ್ದ ಗೀತಂ ಕಾಲೇಜು ಇದೀಗ ಮತ್ತೆ ವಿದ್ಯಾರ್ಥಿನಿ ಸಾವಿನಿಂದ ಸುದ್ದಿಗೆ ಬಂದಿದೆ. ಗೀತಂ ಯುನಿವರ್ಸಿಟಿ ಹಾಸ್ಟಲ್ ನಲ್ಲಿ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ವಿದ್ಯಾರ್ಥಿನಿ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಅಥವಾ ಆಕಸ್ಮಿಕವೋ ಅನ್ನೋದು ತನಿಖೆ ಇಂದಷ್ಟೆ ಗೊತ್ತಾಗಬೇಕಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.