ಹಾವೇರಿ:  ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಕಳೆದ ಹಲವು ವರ್ಷಗಳ ಹಿಂದೆ ಕೋರ್ಟ್ ಮೆಟ್ಟಿಲೇರಿದ್ದ ಹಲವು ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಸಂಧಾನದ ಮೂಲಕ ಬಗೆಹರಿದವು.


COMMERCIAL BREAK
SCROLL TO CONTINUE READING

ಅದರಲ್ಲೂ ಕಳೆದ ಹಲವು ವರ್ಷಗಳಿಂದ ಉಂಟಾಗಿದ್ದ ಭಿನ್ನಾಭಿಪ್ರಾಯದಿಂದ ಮದುವೆ ನಂತರ ಬೇರೆ ಬೇರೆಯಾಗಿ ವಾಸಿಸುತ್ತಿದ್ದ, ಕೋರ್ಟ್ ಮೆಟ್ಟಿಲೇರಿದ್ದ ಎರಡು ಜೋಡಿಗಳು ಒಂದಾದ ಪ್ರಕರಣವೂ ನಡೆಯಿತು‌.


ಇದನ್ನೂ ಓದಿ:  Daily GK Quiz: ಭಾರತದ ನೆಪೋಲಿಯನ್ ಎಂದು ಯಾರನ್ನು ಕರೆಯಲಾಗುತ್ತದೆ?


ಪರಸ್ಪರ ಭಿನ್ನಾಭಿಪ್ರಾಯ ಮರೆತು ಎರಡು ಜೋಡಿಗಳು ಲೋಕ ಅದಾಲತ್ ನಲ್ಲಿ ಒಂದಾಗಿದ್ದರಿಂದ ನ್ಯಾಯಾಧೀಶರು ಹಾಗೂ ವಕೀಲರು ಎರಡೂ ಜೋಡಿಗಳಿಗೆ ಹೂವಿನ ಮಾಲೆ ಹಾಕಿಸಿ, ಮತ್ತೊಮ್ಮೆ ಮದುವೆ ಮಾಡಿದರು. ಎರಡೂ ಜೋಡಿಗಳು ಪರಸ್ಪರ ಭಿನ್ನಾಭಿಪ್ರಾಯ ಮರೆತು ಒಂದಾಗಿ ಬಾಳುವೆ ಮಾಡುವುದಾಗಿ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಒಂದಾದರು.


ಈ ವೇಳೆ ಮಾತನಾಡಿದ ನ್ಯಾಯಾದೀಶರು, ಪ್ರತಿಯೊಬ್ಬರು ಜೀವನದಲ್ಲೂ ಭಿನ್ನಾಭಿಪ್ರಾಯಗಳು ಇರುತ್ತವೆ. ಅವುಗಳನ್ನು ದೊಡ್ಡದು ಮಾಡದೆ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಜೀವನ ನಡೆಸುವಂತೆ ಸಲಹೆ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.