ಕೊರೋನಾ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರದಿಂದ 10 ಸಾವಿರ ಕೋಟಿ ರೂ ಹಗರಣ-ಆಮ್ ಆದ್ಮಿ ಪಕ್ಷ ಆರೋಪ

ರಾಜ್ಯದಲ್ಲಿ ಕೊರೋನಾವೈರಸ್ ನೆಪದಲ್ಲಿ ಸುಮಾರು 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣ ಕಂಡು ಬಂದಿದೆ ಎಂದು ಆಮ್ ಆದ್ಮಿ ಪಕ್ಷ  ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

Last Updated : Oct 23, 2020, 03:19 PM IST
ಕೊರೋನಾ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರದಿಂದ 10 ಸಾವಿರ ಕೋಟಿ ರೂ ಹಗರಣ-ಆಮ್ ಆದ್ಮಿ ಪಕ್ಷ ಆರೋಪ  title=

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ನೆಪದಲ್ಲಿ ಸುಮಾರು 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣ ಕಂಡು ಬಂದಿದೆ ಎಂದು ಆಮ್ ಆದ್ಮಿ ಪಕ್ಷ  ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಇದುವರೆಗೂ ಹೋಮ್ ಪ್ರತ್ಯೇಕತೆಯಲ್ಲಿ ಇರುವವರಿಗೆ ಕಿಟ್ ನೀಡಲಾಗುವುದು ಎಂದು ಹೇಳಿ ಯಾವುದೇ ಕಿಟ್ ನೀಡಿಲ್ಲ ಆದರೆ ಕಿಟ್ ನೀಡಲಾಗಿದೆ ಎಂದು ಸುಮಾರು ₹150 ಕೋಟಿ ಹಣ ದೋಚಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದರು.

ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ? -ಆಮ್ ಆದ್ಮಿ ಪಾರ್ಟಿ ಪ್ರಶ್ನೆ

ಗುರುವಾರ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು , ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡಲು ಸರ್ಕಾರವೇ ತಿಳಿಸಿರುವಂತೆ ₹69 ನೀಡಲಾಗುತ್ತಿದೆ. ಸುಮ್ಮನೆ ಅಂದಾಜು ಲೆಕ್ಕ ಹಾಕಿದರೂ 8 ಲಕ್ಷ ಜನರಿಗೆ 5 ಬಾರಿ ಕರೆ ಮಾಡಲು ನೂರಾರು ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ 60 ರೂ ನೀಡಿ ಹಣ ದೋಚಲಾಗಿದೆ ಎಂದು ದೂರಿದರು.

ದೀಪಾವಳಿ ಮತ್ತು ದಸರಾ ಹಬ್ಬಕ್ಕೆ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಕೊಡುಗೆ ನೀಡುತ್ತಿದ್ದು 3 ನೇ ಸ್ಥಾನದಿಂದ 2 ನೇ ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ವ್ಯಂಗ್ಯವಾಡಿದರು.ದೆಹಲಿ ಮಾದರಿಯನ್ನು ಅನುಸರಿಸಿ ಎಂದು ಸ್ವತಃ ಪ್ರಧಾನಿಗಳೇ ಹೇಳಿದ್ದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿತು.ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿ, ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದರು ಸ್ಪಂದಿಸಲಿಲ್ಲ ಎಂದರು.

ಕೊರೋನಾ ನಿಯಂತ್ರಿಸಲು ಸರ್ಕಾರ ವಿಫಲ: ಸರ್ಕಾರದ ವಿರುದ್ದ ಆಮ್ ಆದ್ಮಿ ಪಕ್ಷದ ವಿನೂತನ ಪ್ರತಿಭಟನೆ

ಪತ್ರಿಕಾ ಗೋಷ್ಠಿಯಲ್ಲಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಮುಖ್ಯ ವಕ್ತಾರ ಶರತ್ ಖಾದ್ರಿ ಮುಂತಾದವರು ಉಪಸ್ಥಿತರಿದ್ದರು. 

Trending News