"ಸುಪ್ರೀಂ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಸರ್ಕಾರ ಕನ್ನಡಿಗರ ಹಿತ ಬಲಿಕೊಟ್ಟಿದೆ"

Aam Aadmi Party : ರಾಜ್ಯದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಲಾಗಿದ್ದು ಎಂದು ರಾಜ್ಯ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. 

Written by - Prashobh Devanahalli | Last Updated : Aug 29, 2023, 05:14 PM IST
  • ಸಮಿತಿಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದ ಕರ್ನಾಟಕ ರಾಜ್ಯ ಸರ್ಕಾರ
  • ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿಕೊಟ್ಟಿದೆ
  • ರಾಜ್ಯ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿಕೆ
"ಸುಪ್ರೀಂ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಸರ್ಕಾರ ಕನ್ನಡಿಗರ ಹಿತ ಬಲಿಕೊಟ್ಟಿದೆ"  title=

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವ ಕರ್ನಾಟಕ ರಾಜ್ಯ ಸರ್ಕಾರವು, ಅಧಿಕಾರವನ್ನು ಉಳಿಸಿಕೊಳ್ಳಲು, ರಾಜಕೀಯ ಲಾಭ ಪಡೆಯಲು ಕನ್ನಡಿಗರ ಹಿತವನ್ನೇ ಬಲಿಕೊಟ್ಟಿದೆ ಎಂದು ರಾಜ್ಯ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ.

ರಾಜ್ಯದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಲಾಗಿದ್ದು. ಕನ್ನಡಿಗರಿಗೆ ಕುಡಿಯುವ ನೀರಿಗೂ ಸಂಕಷ್ಟವಿದೆ ಎಂಬ ಗಂಭೀರ ಸಂಗತಿಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಇಲ್ಲಿನ ವಿಧಾನಸೌಧದ ಬಳಿ ಇರುವ ಶಾಸಕರ ಭವನದಲ್ಲಿ ಮಂಗಳವಾರ ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟ ಸಂಘಗಳು, ನಾಡಿನ ನೀರಾವರಿ ತಜ್ಞರು, ಸಾಹಿತಿಗಳು ಹಾಗೂ ಚಿಂತಕರನ್ನೊಳಗೊಂಡ 'ನಮ್ಮ ಜಲ ನಮ್ಮದು - ಬನ್ನಿ ಮಾತಾಡೋಣ' ವಿಶೇಷ ದುಂಡುಮೇಜಿನ ಸಭೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.  ಮುಖ್ಯಮಂತ್ರಿ ಚಂದ್ರು ರವರು ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಹಾಗೂ ಇನ್ನಿತರ ನಾಯಕರುಗಳ ನೇತೃತ್ವದಲ್ಲಿ ನಡೆಯಿತು.

ಇದನ್ನೂ ಓದಿ : ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಬಿಜೆಪಿ

ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ತಕ್ಷಣ, ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಕೈಗೊಂಡ ಕರ್ನಾಟಕ ಸರ್ಕಾರದ ಧೋರಣೆ ಒಪ್ಪುವಂಥದ್ದಲ್ಲ. ಸರ್ಕಾರ ಪ್ರತಿಯಾಗಿ ಕೂಡಲೇ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು, ರಾಜಕೀಯ ಲಾಭಕ್ಕಾಗಿ ಕನ್ನಡಿಗರ ಹಿತ ಬಲಿಕೊಟ್ಟಿರುವುದು ಸರಿಯಲ್ಲ. 'ಕಾವೇರಿ ನೀರು ನಿಯಂತ್ರಣ ಸಮಿತಿ'ಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಹೇಳುತ್ತಿದ್ದ ಸರ್ಕಾರವು, ಪ್ರತಿಭಟನೆ ಹೆಚ್ಚಾದಂತೆ ಸರ್ವಪಕ್ಷ ಸಭೆ ಕರೆದಿರುವುದು 'ಊರು ಕೊಳ್ಳೆಯಾದಮೇಲೆ ದಿಡ್ಡಿ ಬಾಗಿಲು ಹಾಕಿದಂತೆ' ಈ ಸಭೆ. ಈ ಸಭೆಗೆ ಕಾವೇರಿ ನೀರು ಉಳಿಸಲು ಸತತ ಹೋರಾಟ ನಡೆಸಿರುವ ರೈತ ಮತಯ್ತು ಕನ್ನಡ ಸಂಘಟನೆಗಳನ್ನು ಹೊರಗಿಟ್ಟು, ಎರಡು ರಾಜಕೀಯ ಪಕ್ಷಗಳನ್ನು ಮಾತ್ರ ಕರೆದದ್ದು ಈ ಸರ್ಕಾರದ ಪ್ರಾಮಾಣಿಕತೆಯನ್ನು ಪ್ರಶ್ನೆಸುವಂತಾಗಿದೆ. ಕರ್ನಾಟಕಕ್ಕೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಈ ಮೂರು ಪಕ್ಷಗಳು ತಮ್ಮ ಸ್ವಾರ್ಥ ಸಾಧನೆಗೆ ಕನ್ನಡಿಗರ ಹಿತವನ್ನು ಬಲಿಕೊಟ್ಟಿರುವುದು, ಕಾಣದಂತೆ ನೀರು ಹರಿಸಿರುವುದಕ್ಕೆ ಸಾಕಷ್ಟು ನಿದರ್ಶನಗಳಿವೆ ಎಂದು ಮಾಜಿ ಶಾಸಕರು ಹಾಗೂ ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸಭೆಯಲ್ಲಿ ಹೇಳಿದ್ದಾರೆ.

ತಮಿಳುನಾಡು 'ನೀರಿರಲಿ ಇಲ್ಲದಿರಲಿ, ಕರ್ನಾಟಕದ ಜನರು ಕುಡಿಯುವ ನೀರಿಲ್ಲದೆ ಒದ್ದಾಡಿದರೂ ಪರವಾಗಿಲ್ಲ, ನಮಗೆ ಬರಬೇಕಾದ ಪಾಲು ಬಂದುಬಿಡಲಿ' ಎಂಬ ಧೋರಣೆ ದೇಶದ ಹಿತದೃಷ್ಟಿಯಿಂದ ಅಪಾಯಕಾರಿಯಾದುದ್ದಾಗಿದೆ. ಸಹಜವಾಗಿ ಮಳೆಯಾದ ವರ್ಷದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರಿನ ಹಂಚಿಕೆ ಸರಾಗವಾಗಿ ನಡೆದುಕೊಂಡು ಬರುತ್ತಿದೆ. ಆದರೆ ಮಳೆ ಕಡಿಮೆಯಾದ ವರ್ಷದಲ್ಲಿ ಎರಡೂ ರಾಜ್ಯಗಳು ಸಂಕಷ್ಟವನ್ನೂ ಪರಸ್ಪರ ಹಂಚಿಕೊಳ್ಳಬೇಕು. ಆಗ ನೀರು ಹಂಚಿಕೆಯಲ್ಲಿ ಯಾವ ಸಮಸ್ಯೆಯೂ ಉದ್ಭವಿಸುವುದಿಲ್ಲ. ಹಿಂದಿನ ವರ್ಷ ತಮಿಳುನಾಡಿಗೆ 500 ಟಿಎಂಸಿ ನೀರನ್ನು ಹೆಚ್ಚಾಗಿ ಬಿಡಲಾಗಿದೆ. ಅದನ್ನು ಪೂರ್ಣ ಉಳಿಸಿಕೊಳ್ಳಲು ವ್ಯವಸ್ಥೆ ಇಲ್ಲದೆ ಸಮುದ್ರಕ್ಕೆ ಹರಿದು ಹೋಗಿದೆ. ಕರ್ನಾಟಕಕ್ಕೆ ಮೇಕೆದಾಟು ಯೋಜನೆಗೆ ತಕರಾರು ತೆಗೆದಿದೆ. ಸಮುದ್ರಕ್ಕೆ ನೀರು ಹರಿದು ವ್ಯರ್ಥವಾದರೂ ಪರವಾಗಿಲ್ಲ ಕನ್ನಡಿಗರಿಗೆ ನೀರು ದಕ್ಕಬಾರದು ಎಂಬ ತಮಿಳುನಾಡು ಧೋರಣೆ ಮಾನವ ವಿರೋಧಿಯಾದದ್ದು ಎಂದು ಮುಖ್ಯಮಂತ್ರಿ ಚಂದು ಖಂಡಿಸಿದ್ದಾರೆ.

ಈ ವರ್ಷ ರಾಜ್ಯದಲ್ಲಿ ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಹೀಗಾಗಿ ಕಾವೇರಿ ಕೋಳ್ಳದ ಅಣೇಕಟ್ಟುಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಕೊಡಗು ಸೇರಿದಂತೆ ಕಾವೇರಿ ಜಲಾಶಯದ ಪ್ರದೇಶಗಳಲ್ಲಿ ಕಡಿಮೆ ಮಳೆಯಿಂದಾಗಿ ಒಳಹರಿವು ಕಡಿಮೆಯಾಗಿದೆ. ಜೂನ್‌ನಿಂದ ಆಗಸ್ಟ್‌ ವರೆಗೆ ಕರ್ನಾಟಕದ ಕಾವೇರಿ ಕಣಿವೆಯಲ್ಲಿ ಶೇ.44 ರಷ್ಟು ಮಳೆಯ ಕೊರತೆಯಾಗಿದೆ. ರಾಜ್ಯದಲ್ಲಿ ಮುಂಗಾರು ಅವಧಿ ಮುಗಿಯುತ್ತಿದೆ. ಆದರೆ ತಮಿಳುನಾಡಿನಲ್ಲಿ ಮುಂಗಾರು ಅವಧಿ ಇನ್ನೂ ಇದೆ. ನಮ್ಮಲ್ಲಿ ಮಳೆ ಕೊರತೆಯೂ ಆಗಿದೆ. ಆದರೂ 10 ಸಾವಿರ ಕ್ಯೂಸೆಕ್ಸ್‌ ನೀರು ಬಿಟ್ಟಿದ್ದು ತಪ್ಪೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವರಿಕೆ ಮಾಡಿಕೊಡಬೇಕಿತ್ತು. ಕರ್ನಾಟಕ ಜಲಾಶಯದಲ್ಲಿರುವ ಕುಡಿಯುವ ನೀರಿಗೂ ಸಾಕಾಗುವುದಿಲ್ಲ ಎಂಬುದನ್ನು ಕರ್ನಾಟಕ ಸ್ಪಷ್ಟವಾಗಿ ದಾಖಲೆ ಸಮೇತ ನ್ಯಾಯಾಲಯಕ್ಕೆ ಮನವಿ ಮಾಡಬೇಕಿದೆ ಎಂದರು.

ನೀರಿನ ಕೊರತೆಯಿದ್ದಾಗ ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರಸಂಕಷ್ಟ ಸೂತ್ರ ರೂಪಿಸಿರುವುದೇ ಕರ್ನಾಟಕದ ಸಂಕಷ್ಟಕ್ಕೆ ಕಾರಣವಾಗಿದೆ. ತಮಿಳುನಾಡಿನವರು ನದಿ ಪಾತ್ರದ ತಳ ಭಾಗದಲ್ಲಿ ಯೋಜನೆ ಮಾಡುತ್ತಿದ್ದಾರೆ. ಅದಕ್ಕೆ ನೀರಿನ ಹಂಚಿಕೆ ಇಲ್ಲ. ಈ ಬಗ್ಗೆ ತಾಂತ್ರಿಕ ಮಾಹಿತಿ ಕಲೆಹಾಕುವ ಕೆಲಸ ಆಗಬೇಕು. ಹೊಗೇನಕಲ್ ಎರಡನೇ ಹಂತದ ಯೋಜನೆ ಕೈಗೆತ್ತಿಕೊಳ್ಳುವ ಮಾತನ್ನು ತಮಿಳುನಾಡು ಸರ್ಕಾರ ಹೇಳುತ್ತಿದೆ. ಇದು ನಮ್ಮ ನೀರಿನ ಹಕ್ಕಿನ ಮೇಲೆ ಹೊಡೆತ. ಇಂತಹ ವಿಚಾರಗಳನ್ನು ಅಧ್ಯಯನ ಮಾಡಲು ವಿವಾದಕ್ಕೆ ಸಂಬಂಧವಿಲ್ಲದ ರಾಜ್ಯದ ತಜ್ಞರ ತಂಡವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಕೋರಬೇಕಿದೆ ಎಂದು ಸಭೆಯಲ್ಲಿ ಮಹತ್ವದ ವಿಚಾರವನ್ನು ಮುಖ್ಯಮಂತ್ರಿ ಚಂದ್ರು ಪ್ರಸ್ತಾಪ ಮಾಡಿದರು.

ಸಭೆಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಮಾತನಾಡಿ, ನಿರಂತರವಾಗಿ ಕಾವೇರಿ ವಿಚಾರದಲ್ಲಿ ಹೀರಾಟ ಮಾಡಿದರೂ, ನಮಗೆ ಸರಿಯಾದ ನ್ಯಾಯ ಸಿಕ್ಕಿಲ್ಲ. ನಮ್ಮ ಜಲಾಶಯಗಳಿಗೆ ಬಂದಂತಹ ನೀರನ್ನು ಏಕಾಯೇಕಿ ಬಿಟ್ಟು, ನಮ್ಮನ್ನು ಖಾಲಿ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ನಾವು ಆಭಾಗದ ರೈತರಾಗಿ ಅದೇ ನೀರನ್ನು ನಂಬಿಕೊಂಡಿರುವ ಜನ ನಾವು. ನಮ್ಮ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಈ ಸರ್ಕಾರದವರು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗುವಂತಹ ವಿಚಾರ ಬಹಳಾ ಮುಖ್ಯವಾದದ್ದು. ಏಕೆಂದರೆ ಇಂದು ನೀರಾವರಿ ಸಚಿವರಾದ ಡಿ.ಕೆ ಶಿವಕುಮಾರ್‌ ಅವರು ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಪಾದಯಾತ್ರೆ ಮಾಡಿದವರು. ಆದರೆ, ಈಗ ಅಧಿಕಾರಕ್ಕೆ ಬಂದ ಬಳಿಕ ಯೋಜನೆಗೆ ಯಾವುದೇ ಹಣ ಮೀಸಲಿಟ್ಟಿಲ್ಲ. ಇಲ್ಲಿ ಎಂತಹ ರಾಜಕರಣ ಮಾಡುತ್ತಿದ್ದಾರೆ ಎಂದು ಜನರಲ್ಲಿ ಜಾಗೃತ್ತಿ ಮೂಡಿಸಬೇಕು ಎಂದು ಕರ್ನಾಟಕದ ಸರ್ವ ಸಂಘ ಸಭೆ ನಡೆಸಲು ಯೋಚನೆ ಮಾಡಿ ಇಂದು ಈ ದುಂಡು ಮೇಜಿನ ಸಭೆ ಸೇರಲಾಗಿದೆ ಎಂದರು.

ಇದನ್ನೂ ಓದಿ: ನೂರು ದಿನಕ್ಕೆ ಭಂಡ ಕಾಂಗ್ರೆಸ್ಸಿನ 100 ಕರ್ಮ ಕಾಂಡಗಳು: ಬಿಜೆಪಿ ಟೀಕೆ 

ಹೊಗೇನಿಕಲ್ ಸುಪ್ರೀಂ ಕೋರ್ಟ್‌ 2007ರ ತೀರ್ಪು ಬಂದನಂತರ ಏನು ಹೆಚ್ಚುವರಿ ನೀರು 178 ಟಿಎಂಸಿ ತಮಿಳುನಾಡಿಗೆ ಕೊಟ್ಟು ಉಳಿದ್ದನ್ನು ಬಳಸಿಕೊಳ್ಳಬಹುದು ಎಂಬ ಅಭಿಪ್ರಾಯ ಬಂದಿದೆ. ಅದರ ಪ್ರಕಾರ ಹೊಗೆನಿಕಲ್ ಫಾಲ್ಸ್‌ನಲ್ಲಿ 25 ಟಿಎಂಸಿ ನೀರು ಬಳಸಿಕೊಳ್ಳುವುದಕ್ಕೆ ತಮಿಳುನಾಡು ಸರ್ಕಾರ ಈಗಾಗಗಲೇ ಕಾರ್ಯಯೋಜನೆ ಜಾರಿಗೆ ತಂದಿದ್ದಾರೆ. ಹೀಗಿರುವಾಗ ನಾವೇಕೆ ಮೇಕೆದಾಟು ಅಣೇಕಟ್ಟು ನಿರ್ಮಾಣ ಮಾಡಬಾರದು. ಸುಮಾರು 50-60 ಟಿಎಂಸಿ ನೀರು ಪೋಲಾಗುವುದನ್ನು ಏಕೆ ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ ಎಂಬುದು ನಮ್ಮ ಆತಂಕ ಎಂದು ಶಾಂತಕುಮಾರ್‌ ಹೇಳಿದರು.

ಎರಡನೇಯದಾಗಿ ಅಂದು ಸುಪ್ರೀಂ ಕೋರ್ಟ್‌ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನಿಯೋಜಿಸದ ಪ್ರಮಾಣ ಬಹಳಾ ಕಡಿಮೆ. ಅದನ್ನು ಹೆಚ್ಚುವರಿ ಮಾಡಬೇಕು. 15 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಗರ ಭಾಗಕ್ಕೆ ಕುಡಿಯುವ ನೀರಿನ ಸಲುವಾಗಿ 30 ಟಿಎಂಸಿ ನೀರನ್ನ ಕೊಡಲು ಆದೇಶ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನೆ ಅರ್ಜಿಯನ್ನು ರಾಜ್ಯ ಸರ್ಕಾರ ಯಾಕೆ ಹಾಕ್ಬಾರ್ದು? ಈ ಅಂಶಗಳನ್ನು ಸರ್ಕಾರದ ಗಮನಕ್ಕೆ ತರುವ ಅಗತ್ಯವಿದೆ ಎಂದು ಸಭೆಯಲ್ಲಿ ಪ್ರಸ್ಥಾಪಿಸಿದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News