ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ (Health Department) ನಿರಂತರವಾಗಿ ವಿವಿಧ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ.ಸುಧಾಕರ್‌ (Sudhakar) ಅವರ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ (Aam Admi Party) ಒತ್ತಾಯಿಸಿದೆ.


COMMERCIAL BREAK
SCROLL TO CONTINUE READING

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ (AAP) ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಆರೋಗ್ಯ ಇಲಾಖೆಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ, ಬಡ್ತಿ ಹಾಗೂ ವರ್ಗಾವಣೆಯಲ್ಲಿ ಭ್ರಷ್ಟಾಚಾರವು ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಆರೋಪಿಸಿದರು. 


ಇದನ್ನೂ ಓದಿ:ನವೀನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು: ಎಚ್​ಡಿಕೆ


ವೈದ್ಯಕೀಯ ಉಪಕರಣಗಳು ಹಾಗೂ ಔಷಧಿಗಳ ಖರೀದಿ, ನಿರ್ಮಾಣ ಕಾಮಗಾರಿ ಹಾಗೂ ಮೂಲಸೌಕರ್ಯ ಕಲ್ಪಿಸುವುದರಲ್ಲಿ ಭಾರೀ ಪ್ರಮಾಣದ ಅಕ್ರಮವಾಗುತ್ತಿದೆ. ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಪಡೆಯಲು ರೋಗಿಗಳು ಲಂಚ ನೀಡಬೇಕಾಗಿದೆ ಎಂದು ದೂರಿದರು.


ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಬಿಜೆಪಿಯ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿಯವರು ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಹಾಗೂ ಔಷಧಿ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ (Lokayukta) 40 ದೂರು ನೀಡಿದ್ದಾರೆ ಎಂದು ತಿಳಿಸಿದರು.


ಈ ಸಂಬಂಧ ತನಿಖೆಯೇ ನಡೆಯದಿರುವುದು ದುರದೃಷ್ಟಕರ. ಆದ್ದರಿಂದ ಆರೋಗ್ಯ ಸಚಿವರು (Health Minister) ರಾಜೀನಾಮೆ ನೀಡಬೇಕು. ನಿಷ್ಪಕ್ಷಪಾತ ತನಿಖೆ ನಡೆದರೆ ಆರೋಗ್ಯ ಇಲಾಖೆಯಲ್ಲಿನ ಕೋಟಿಗಟ್ಟಲೆ ಅವ್ಯವಹಾರ ಬಯಲಾಗುತ್ತದೆ. ರಾಜ್ಯಪಾಲರು ಶೀಘ್ರವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳಬೇಕು ಎಂದು ನಂಜಪ್ಪ ಕಾಳೇಗೌಡ ಒತ್ತಾಯಿಸಿದರು.


ಇದನ್ನೂ ಓದಿ:ತನ್ವೀರ್ ಸೇಠ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಡಿಕೆಶಿಯವರಿಗೆ ಭಯವೇ?: ಬಿಜೆಪಿ


ನಿವೃತ್ತ ಕೆಎಎಸ್‌ ಅಧಿಕಾರಿ ಹಾಗೂ ಎಎಪಿಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ರವಿ ಶಂಕರ್‌ ಮಾತನಾಡಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಹಣದ ದಾಹಕ್ಕೆ ಸಾಮಾನ್ಯ ರೋಗಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಿಂದ ರೋಗಿಯ ಶವವನ್ನು ಹೊರತರಬೇಕಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಂಚ ನೀಡಬೇಕಾಗಿದೆ ಎಂದು ಆರೋಪಿಸಿದರು.


ಆರೋಗ್ಯ ಇಲಾಖೆಯ ಟೆಂಡರ್‌ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರುವುದು ಸಾಮಾನ್ಯವಾಗಿದ್ದರೂ, ಯಾರ ವಿರುದ್ಧವೂ ತನಿಖೆ ನಡೆಯುತ್ತಿಲ್ಲ. ಭಷ್ಟ ಸಚಿವರಿಂದಾಗಿ ಇಲಾಖೆಯ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ ಎಂದು ತಿಳಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.