ರಾಜಧಾನಿಯಲ್ಲಿ ರಸ್ತೆ ಗಂಡಾಗುಂಡಿ: ನ. 19ಕ್ಕೆ ಎಎಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಕರೆ

ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯವಾಗಿವೆ. ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಾಗಿ ಅಮಾಯಕ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.  

Written by - Ranjitha R K | Last Updated : Nov 17, 2022, 04:11 PM IST
  • ಫ್ರೀಡಂ ಪಾರ್ಕ್‌ನಲ್ಲಿ ಶನಿವಾರದಂದು ಆಮ್‌ ಆದ್ಮಿ ಪಾರ್ಟಿ ಬೃಹತ್‌ ಪ್ರತಿಭಟನೆ
  • ಸರ್ಕಾರದ ನಿರ್ಲಕ್ಷ್ಯದ ವಿರುದ್ದ ಹೋರಾಟ
  • ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿರುವ ಆಪ್
 ರಾಜಧಾನಿಯಲ್ಲಿ ರಸ್ತೆ ಗಂಡಾಗುಂಡಿ: ನ. 19ಕ್ಕೆ ಎಎಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಕರೆ title=

ಬೆಂಗಳೂರು : ರಸ್ತೆ ಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಈ ಕುರಿತು ನಿರ್ಲಕ್ಷ್ಯ ವಹಿಸಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರದಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. 

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಎಎಪಿ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯವಾಗಿವೆ ಎಂದು ಅವರು ಹೇಳಿದ್ದಾರೆ. ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಾಗಿ ಅಮಾಯಕ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗುಂಡಿಗಳಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಾರ್ಟಿಯು ನವೆಂಬರ್‌ 19ರ ಶನಿವಾರದಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ, ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : " ರಾಜಕೀಯ ಬೇಕಿದ್ರೆ ಬಿಡ್ತೀನಿ, ಮಂಡ್ಯ ಬಿಡಲ್ಲ "

ಬೆಂಗಳೂರು ನಗರ ಎಎಪಿ ಸಂಘಟನಾ ಕಾರ್ಯದರ್ಶಿ ಸುರೇಶ್‌ ರಾಥೋಡ್‌ ಮಾತನಾಡಿ, “ರಸ್ತೆಗುಂಡಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವುದು ಹಾಗಿರಲಿ, ರಸ್ತೆಗುಂಡಿಗಳಿಂದ ಕೈಕಾಲು ಮುರಿದುಕೊಂಡವರಿಗೆ ಹಾಗೂ ಬಲಿಯಾದವರ ಕುಟುಂಬದವರಿಗೆ ಪರಿಹಾರ ನೀಡಲೂ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದಿದ್ದಾರೆ. ಮುಖ್ಯಮಂತ್ರಿಯವರು, ಸಚಿವರು, ಶಾಸಕರು, ಅಧಿಕಾರಿಗಳು ಯಾರೂ ಕೂಡ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್‌ ಪದೇಪದೇ ಛೀಮಾರಿ ಹಾಕಿದರೂ ತಲೆಕೆಡಿಸಿಕೊಳ್ಳದಷ್ಟು ಈ ಸರ್ಕಾರ ಹಾಗೂ ಬಿಬಿಎಂಪಿ ಭಂಡತನ ಮೆರೆಯುತ್ತಿದೆ ಎಂದು ಹೇಳಿದ್ದಾರೆ. ಪದೇಪದೇ ಡೆಡ್‌ಲೈನ್‌ ಮುಂದಕ್ಕೆ ಹಾಕುವ ಮೂಲಕ ಬೆಂಗಳೂರಿಗರನ್ನು ವಂಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಬೊಮ್ಮಾಯಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News