close

News WrapGet Handpicked Stories from our editors directly to your mailbox

ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಎಸ್.ಓಕಾ ಪ್ರಮಾಣ ವಚನ

 ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಅಭಯ್ ಎಸ್ ಓಕಾ ಪ್ರಮಾಣವಚನ ಸ್ವೀಕರಿಸಿದರು.

Updated: May 10, 2019 , 02:48 PM IST
ಕರ್ನಾಟಕ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಎಸ್.ಓಕಾ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಎಸ್.ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಈ ಹಿಂದೆ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅಭಯ್ ಶ್ರೀನಿವಾಸ್ ಓಕಾ ಅವರನ್ನು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದರು. ಈ ಬೆನ್ನಲ್ಲೇ ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಅಭಯ್ ಎಸ್ ಓಕಾ ಪ್ರಮಾಣವಚನ ಸ್ವೀಕರಿಸಿದರು.

ಕಳೆದ ಜನವರಿಯಲ್ಲಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ನ್ಯಾಯಮೂರ್ತಿ ಅಭಯ್ ಓಕಾ ಅವರನ್ನು ನೇಮಕ ಮಾಡಲಾಗಿದೆ.