ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ.5 ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಮತ್ತು ‌ಆತನ ಸಂಬಂಧಿಯನ್ನು ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು(ACB Raid) ಮಿಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.


COMMERCIAL BREAK
SCROLL TO CONTINUE READING

ಮುಜರಾಯಿ ಇಲಾಖೆ(Muzrai Department) ತಹಶೀಲ್ದಾರ್ ದಶರಥ ನಕುಲ ಜಾಧವ್ ಹಾಗೂ ಆತನ ಸಂಬಂಧಿ ಸಂತೋಷ್ ಕಡೋಲಕರ್ ಬಂಧಿತ ಆರೋಪಿಗಳು. ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ(Temple)ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಯೋಜನೆಯಡಿ 4 ಲಕ್ಷ ರೂ. ಮಂಜೂರಾಗಿತ್ತು. ಆದರೆ ಈ ಅನುದಾನ ಬಿಡುಗಡೆಗೆ ನಕುಲ ಜಾಧವ್ ಅವರು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.


ಇದನ್ನೂ ಓದಿ: HD Deve Gowda : ಮಾಜಿ ಪ್ರಧಾನಿ ಹೆಚ್ ಡಿಡಿಗೆ ಕೊರೋನಾ ಪಾಸಿಟಿವ್!


ಲಂಚದ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಸುಭಾಷ್ ಗೋಡಕೆ ಎಂಬವರು ಎಸಿಬಿ(ACB) ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲ್ದಾರ್(Tahsildar Arrested) ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಆತನ ಸಂಬಂಧಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ್ ಜಾಧವ್ ಅವರನ್ನೂ ವಶಕ್ಕೆ ಪಡೆದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


ಎಸಿಬಿ ಎಸ್ಪಿ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನೀಲ್ ಕುಮಾರ್ ಮತ್ತು ಸಿಬ್ಬಂದಿ ದಾಳಿ‌ ನಡೆಸಿದ್ದರು ಎಂದು ತಿಳಿದುಬಂದಿದೆ.


ಇದನ್ನೂ ಓದಿ: Electric Bus: BMTC ಆಯ್ತು ಇದೀಗ KSRTCಗೂ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.