ಬೆಳ್ಳಂಬೆಳಗ್ಗೆ ರಾಜ್ಯದ 17 ಕಡೆ ದಾಳಿ ನಡೆಸಿ ಶಾಕ್ ನೀಡಿದ ಎಸಿಬಿ ಅಧಿಕಾರಿಗಳು
ಐವರು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ರಾಜ್ಯದ 17 ಕಡೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು.
ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರು ನಗರ, ಚಿಂತಾಮಣಿ, ಉಡುಪಿ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಒಟ್ಟು 17 ಕಡೆಗಳಲ್ಲಿ ಏಕಕಾಲದಲ್ಲಿ ದಲಿ ನಡೆಸಿರುವ ಎಸಿಬಿ ಅಧಿಕಾರಿಗಳು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಐವರು ಅಧಿಕಾರಿಗಳು ಆದಾಯಕ್ಕಿಂತಲೂ ಹೆಚ್ಚು ಆಸ್ತಿ-ಪಾಸ್ತಿ ಹೊಂದಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗಿಳಿದಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದೆ.
ಬೆಂಗಳೂರಿನ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಆರ್.ಶ್ರೀಧರ್, ದಾವಣಗೆರೆ ಕೃಷಿ ಇಲಾಖೆ ಉಪ ನಿರ್ದೇಶಕಿ ಹಂಸವೇಣಿ, ಮಂಗಳೂರು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕ ಡಿ.ಮಂಜುನಾಥ್, ಬೆಂಗಳೂರು ನಗರ ಯೋಜನೆ ಸಹಾಯಕ ನಿರ್ದೇಶಕ ಕೆ.ಬೀಸೆಟಪ್ಪ ಮತ್ತು ಮೈಸೂರು ಮೂಡಾ ಕಿರಿಯ ಅಭಿಯಂತರ ಕೆ.ಮಣಿ ಈ ಐವರು ಅಧಿಕಾರಿಗಳ ನಿವಾಸ, ಕಚೇರಿ, ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದರೆ.