ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಮುಂದುವರೆಯಲಿ: ಭಾಸ್ಕರ್ ರಾವ್
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
ಬೆಂಗಳೂರು : ಭ್ರಷ್ಟಾಚಾರ ನಿಗ್ರಹದಳ (ಎಸಿಬಿ)ಯನ್ನ ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಪ್ ಮುಖಂಡ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ- 'ಪಿಎಸ್ಐ ಅಕ್ರಮ ನೇಮಕ ಪ್ರಕರಣದ ಎಲ್ಲಾ ಬಂಧಿತರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿ'
ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ. ಆದ್ದರಿಂದ ಎಸಿಬಿಯನ್ನು ಮುಚ್ಚಬೇಕು ಮತ್ತು ಬಲವಾದ ಸ್ವತಂತ್ರ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದು ಭಾಸ್ಕರ್ ರಾವ್ ತಮ್ಮ ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ.
'ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ'
ಎಸಿಬಿ ಕಾರ್ಯವೈಖರಿಯನ್ನ ಪ್ರಶ್ನಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಇತ್ತೀಚಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.