KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ರೂ.1 ಕೋಟಿ ಅಪಘಾತ ಪರಿಹಾರ ವಿಮೆ

KSRTC Accident Compensation Insurance Scheme: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ  ಹಾಗೂ ಇತರೆ ಕಾರಣಗಳಿಂದ‌ ಮೃತಪಟ್ಟ (ಹೃದಯಾಘಾತ/ ಕ್ಯಾನ್ಸರ್ , ಸ್ಟ್ರೋಕ್)  16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ  ರೂ.10 ಲಕ್ಷ ನೀಡಲಾಗಿದೆ.

Written by - Manjunath Hosahalli | Edited by - Manjunath N | Last Updated : Feb 14, 2024, 04:49 PM IST
  • ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ
  • ಇದುವರೆವಿಗೂ 12 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ
KSRTC: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ರೂ.1 ಕೋಟಿ ಅಪಘಾತ ಪರಿಹಾರ ವಿಮೆ title=

KSRTC Accident Compensation Insurance: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ  ಹಾಗೂ ಇತರೆ ಕಾರಣಗಳಿಂದ‌ ಮೃತಪಟ್ಟ (ಹೃದಯಾಘಾತ/ ಕ್ಯಾನ್ಸರ್ , ಸ್ಟ್ರೋಕ್)  16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ  ರೂ.10 ಲಕ್ಷ ನೀಡಲಾಗಿದೆ.

ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಸಿಬ್ಬಂದಿಗಳ ಅವಲಂಬಿತರನ್ನು ಭೇಟಿ ಮಾಡಿ, ನಿಗಮವು ಕಳೆದ  ಎರಡು ತಿಂಗಳ‌ ಹಿಂದಷ್ಟೇ ಪರಿಹಾರ ಮೊತ್ತವನ್ನು ರೂ.3 ಲಕ್ಷದಿಂದ ರೂ.10 ಲಕ್ಷಗಳಿಗೆ ಏರಿಕೆ ಮಾಡಿದ್ದು, ಇದರಿಂದ‌ ಇಂದು 16 ಕುಟುಂಬಗಳಿಗೆ ಆರ್ಥಿಕವಾಗಿ ಸ್ವಲ್ಪ ಹೆಚ್ಚು ಹಣ ದೊರೆಯುವಂತಾಗಿದ್ದು, ಜೀವಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ, ಆದರೂ ಪರಿಹಾರ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಸುಸೂತ್ರ ಜೀವನ ನಿರ್ವಹಣೆ ಮಾಡುವಂತೆ ತಿಳಿಸಿ ಎಲ್ಲರಿಗೂ ಶುಭ ಹಾರೈಸಿದರು.

ಇದನ್ನೂ ಓದಿ- Rahul Gandhi: ವಯನಾಡ್ ಕ್ಷೇತ್ರದ ಮೇಲೆ CPI ಕಣ್ಣು! ಲೋಕ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕುತ್ತುತರುತ್ತಾ ಮಿತ್ರಪಕ್ಷ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಸಿಬ್ಬಂದಿಗಳ ಅವಲಂಭಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. 

•    ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. 

•    ಇದುವರೆವಿಗೂ 12 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. 

 ಶ್ರೀ ರಾಜೇಶ್ ಡಿ.ಸಿ, ಚಾಲಕ-ಕಂ-ನಿರ್ವಾಹಕ, ಬಿಲ್ಲೆ ಸಂಖ್ಯೆ: 1447, ಅರಕಲಗೂಡು ಘಟಕ, ಹಾಸನ ವಿಭಾಗ, ರವರು ದಿನಾಂಕ: 29.07.2023  ರಂದು ಮೃತಪಟ್ಟಿರುತ್ತಾರೆ. ಮೃತರ ಅವಲಂಭಿತರಿಗೆ ರೂ.1 ಕೋಟಿಗಳ ಅಪಘಾತ ಪರಿಹಾರ ವಿಮಾ ಜೊತೆಗೆ, ಉಪಧನ, ಭವಿಷ್ಯ ನಿಧಿ, ನೌಕರರ ಕುಟುಂಬ ಕಲ್ಯಾಣ ಯೋಜನೆ, ಡಿಆರ್ಬಿಎಫ್ ಹಾಗೂ ಗಂಪು ವಿಮಾ ಯೋಜನೆಯಿಂದ ರೂ.14,19,980/- ಪರಿಹಾರವನ್ನು ನೀಡಲಾಯಿತು.

ಆದರೆ ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಭಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ಜಾರಿಗೆ ಬರುವಂತೆ ರೂ.10 ಲಕ್ಷಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಿ ಮುಂದುವರೆದ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ನಿಗಮದ ಕುಟುಂಬ ಕಲ್ಯಾಣ ಪರಿಹಾರ ಯೋಜನೆ ಅಡಿಯಲ್ಲಿ ಕಳೆದ ನವೆಂಬರ್ 2023 ಮತ್ತು ಡಿಸೆಂಬರ್ 2023 ರ ಮಾಹೆಗಳಲ್ಲಿ ಮರಣ ಹೊಂದಿದ 16 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ರೂ.10.00 ಲಕ್ಷಗಳ ಪರಿಹಾರದ ಚೆಕ್ ನ್ನು ವಿತರಿಸಲಾಯಿತು.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ. ಎಸ್ಆರ್. ಶ್ರೀನಿವಾಸ್ (ವಾಸು) ರವರು ಕೇಂದ್ರ ಕಛೇರಿಯಲ್ಲಿ ನಿಗಮದ ಸೇವೆಯಲ್ಲಿರುವಾಗ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಭಿತರಿಗೆ ರೂ. 1 ಕೋಟಿ ಪರಿಹಾರ ಮೊತ್ತದ ಚೆಕ್ಕನ್ನು ಹಾಗೂ ಇತರೆ ಕಾರಣಗಳಿಂದ ಮೃತಪಟ್ಟಿದ್ದ 16 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆಯಡಿ ತಲಾ ರೂ. 10 ಲಕ್ಷಗಳು ಹಾಗೂ ಅವರಿಗೆ ನಿಗಮದಿಂದ ಪಾವತಿಸಬೇಕಾದ ಭವಿಷ್ಯನಿಧಿ, ಉಪದನ ಚೆಕ್ಕನ್ನು  ವಿತರಿಸಿದರು.

ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಅಧ್ಯಕ್ಷರು ಕೆ.ಎಸ್ .ಆರ್.ಟಿ.ಸಿ. ರವರು ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಅತೀ ಶ್ರಮ ಜೀವಿಗಳಾಗಿದ್ದು, ನಿಗಮವು ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವುದನ್ನು ತಿಳಿದು ಬಹಳ ಸಂತೋಷವಾಯಿತು.

ಈ ಯೋಜನೆಗಳ ಅನುಷಾನಕ್ಕಾಗಿ ಮಾನ್ಯ ಸಾರಿಗೆ ಸಚಿವರನ್ನು ಹಾಗೂ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ತಮಗೆ ದೊರೆತಿರುವ ಪರಿಹಾರ ಹಣವನ್ನು ಯಾರಿಗೂ ಕೊಡದೇ ಮುಂದಿನ ಜೀವನ ನಿರ್ವಹಣೆಗಾಗಿ ಸೂಕ್ತವಾಗಿ ವಿನಿಯೋಗಿಸಿ ಕಾಪಾಡಿಕೊಳ್ಳುವಂತೆ ಹಾಗೂ ಅವಲಂಭಿತರಲ್ಲಿ ನೌಕರಿಗೆ ಅರ್ಹರಿರುವವರಿಗೆ ಕಾಲವಿಳಂಬವಿಲ್ಲದೇ ನೌಕರಿಯನ್ನು ಒದಗಿಸಲು ಕ್ರಮ ಜರುಗಿಸಲು ತಿಳಿಸಿ ಎಲ್ಲರಿಗೂ ಶುಭ ಹಾರೈಸಿ, ಕಾರ್ಮಿಕ ಪರವಾದ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಂಡು ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ. ವಿ.ಅನ್ಬುಕುಮಾರ್, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಡಾ.ನಂದಿನಿದೇವಿ. ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮಾತ್ತು ಜಾಗೃತ), ಕಾರ್ಮಿಕ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News