ಹಂಪಿ: ವಿಶ್ವ ವಿಖ್ಯಾತ ಹಂಪಿಯಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದಾಗಿ  ಅಂಗಡಿಗಳು, ಛತ್ರ, ಹೋಟೆಲ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ.


COMMERCIAL BREAK
SCROLL TO CONTINUE READING

ಈ ಅಗ್ನಿ ಅನಾಹುತದಲ್ಲಿ ಹಂಪಿಯ ಜನತಾ ಪ್ಲಾಟ್ ನಲ್ಲಿದ್ದ ಪ್ರಸಿದ್ದ ಮ್ಯಾಂಗೋ ಟ್ರೀ ಹೊಟೇಲ್, ಅನ್ನಪೂರ್ಣೇಶ್ವರಿ ಛತ್ರ ಮತ್ತು ಬಟ್ಟೆ ಅಂಗಡಿಗಳು ಸುಟ್ಟು ಭಸ್ಮವಾಗಿವೆ. 


ಇದನ್ನೂ ಓದಿ- ಸಗಣಿ ಎರೆಚಾಟ-ಅಶ್ಲೀಲ ಬೈದಾಟ.. ತಮಿಳುನಾಡಲ್ಲಿ ಕನ್ನಡಿಗರ ಸಂಭ್ರಮ!!


ಹಂಪಿಯ ಜನತಾ ಪ್ಲಾಟ್ ನಲ್ಲಿ ಮೊದಲು ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಪಕ್ಕದ ಅಂಗಡಿಗಳು, ಹೋಟೆಲ್  ಮತ್ತು ಛತ್ರಕ್ಕೆ ಬೆಂಕಿ ಆವರಿಸಿದೆ. ಈ ಸಂದರ್ಭದಲ್ಲಿ ಹೋಟೆಲ್ ನಲ್ಲಿದ್ದ ಸಿಲಿಂಡರ್ ಗಳು ಬ್ಲಾಸ್ಟ್ ಆಗಿದ್ದು ಇಡೀ ಮ್ಯಾಂಗೋ ಟ್ರೀ ಹೋಟೆಲ್ ಸುಟ್ಟು ಕರಕಲಾಗಿದೆ ಎಂದು ವರದಿ ಆಗಿದೆ. 


ಇದನ್ನೂ ಓದಿ- ಪಂಚರತ್ನ ರಥಯಾತ್ರೆ; ಬೆಂಗಳೂರಿನಲ್ಲಿ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ


ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಆಗಿಲ್ಲ ಘಟನೆ ಕುರಿತಂತೆ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ