HD Kumaraswamy vs IGP M Chandrashekhar: ರಾಜ್ಯದಲ್ಲಿ ಐಪಿಎಸ್ ಅಧಿಕಾರಿ ಮತ್ತು ಕೇಂದ್ರ ಸಚಿವರ ನಡುವಿನ ಸಮರ ತಾರಕಕ್ಕೆ ಏರಿದೆ. ಲೋಕಾಯುಕ್ತ ಐಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾಡಿದ್ದ ಭ್ರಷ್ಟಾಚಾರದ ಆರೋಪ ಇದೀಗ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ.


COMMERCIAL BREAK
SCROLL TO CONTINUE READING

ಏನಿದು ಸಂಘರ್ಷ..?


ಗಂಗೇನಹಳ್ಳಿ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ(ಸೆ.೨೭) ಸಂಜೆ ದೆಹಲಿಯಿಂದ ಬಂದು ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.‌ ಶನಿವಾರ(ಸೆ.೨೮) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿಯವರು, ಹಾಲಿ ಲೋಕಾಯುಕ್ತ ಐಜಿಪಿಯಾಗಿರುವ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಬಹಿರಂಗವಾಗಿಯೇ ಭ್ರಷ್ಟಾಚಾರದ ಆರೋಪ ಮಾಡಿದ್ದರು.


ಇದನ್ನೂ ಓದಿ: ಜನಾರ್ಧನ್‌ ರೆಡ್ಡಿಗೆ ಸುಫ್ರೀಂ ಕೋರ್ಟ್‌ ಬಿಗ್‌ ರಿಲೀಪ್


ಎಚ್‌ಡಿಕೆಯವರ ಗಂಭೀರ ಆರೋಪಕ್ಕೆ ತಿರುಗೇಟು ನೀಡಿದ್ದ ಐಜಿಪಿ ಚಂದ್ರಶೇಖರ್ ಅವರು, ತಮ್ಮ ತಂಡಕ್ಕೆ ಸ್ಥೈರ್ಯ ತುಂಬುವ ರೀತಿಯಲ್ಲಿ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರನ್ನು ಆರೋಪಿ ಎಂದು ಉಲ್ಲೇಖಿಸಿದ್ದ ಅವರು, ಇಂಗ್ಲಿಷ್ ಕವಿ ಜಾರ್ಜ್ ಬರ್ನಾರ್ಡ್ ಶಾ ಅವರ ʼಹಂದಿಗಳ ಜೊತೆ ಗುದ್ದಾಡಬಾರದು, ಹಂದಿಗಳಿಗೆ ಮೂಲ ಹೊಲಸೇ ಇಷ್ಟʼ ಎಂಬ ಸಾಲುಗಳನ್ನು ಉಲ್ಲೇಖಿಸಿದ್ದರು. ಇದೀಗ ಹಂದಿ ಎಂಬ ಪದ ಬಳಕೆ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಬೆಂಗಳೂರಿನಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿಯವರು, ಐಜಿಪಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್, ನನ್ನ ಪ್ರಶ್ನೆಗಳಿಗೆ ಆ ಅಧಿಕಾರಿ ಉತ್ತರ ಕೊಡಲಿ, ನಾನು ಎಲ್ಲಿ ಮಾತನಾಡಬೇಕೋ ಅಲ್ಲೇ ಮಾತನಾಡುತ್ತೇನೆʼ ಅಂತಾ ಕಿಡಿಕಾರಿದ್ದಾರೆ. ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧಪಡಿಸಿದ್ದಾರೆ. ಆ ಪತ್ರವನ್ನು ಯಾರು? ಎಲ್ಲಿ ತಯಾರು ಮಾಡಿಕೊಟ್ಟರು? ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆʼ ಎಂದು ಕುಟುಕಿದ್ದಾರೆ.


ಇದನ್ನೂ ಓದಿ: ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು


ಇದೇ ವೇಳೆ ಕುಮಾರಸ್ವಾಮಿಯವರ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಂದಿ ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಐಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.