ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ಆರಗ ಜ್ಞಾನೇಂದ್ರ
ಕೇವಲ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾಡುವ ಕೆಟ್ಟ ಕೆಲಸದಿಂದ ಇಡೀ ಪೊಲೀಸ್ ಇಲಾಖೆಯ ಬಗ್ಗೆಯೇ ಸಾರ್ವಜನಿಕರಲ್ಲಿ ನೆಗೆಟಿವ್ ಭಾವನೆ ಬೆಳೆಯಲು ಕಾರಣವಾಗುತ್ತದೆ.
ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಭಾಗಿಯಾಗುವ ಯಾವುದೇ ಪೊಲೀಸ್ ಸಿಬ್ಬಂದಿ(Action against officials) ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ, ಸಾರ್ವಜನಿಕರ ಜೀವ ಹಾಗೂ ಆಸ್ತಿ-ಪಾಸ್ತಿಗಳನ್ನು ರಕ್ಷಿಸಬೇಕಾದ ಹೊಣೆಗಾರಿಕೆ ಹೊಂದಿರುವ ಪೊಲೀಸ್ ಸಿಬ್ಬಂದಿಗಳೇ ಅಪರಾಧ ಎಸಗುವುದನ್ನು(Criminal Activities) ಸಹಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ.
ರಾಜ್ಯದಲ್ಲಿ ಸರಿಸುಮಾರು 1 ಲಕ್ಷಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ(Karnataka Police)ಗಳಿದ್ದು, ಕೇವಲ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾಡುವ ಕೆಟ್ಟ ಕೆಲಸದಿಂದ ಇಡೀ ಪೊಲೀಸ್ ಇಲಾಖೆಯ ಬಗ್ಗೆಯೇ ಸಾರ್ವಜನಿಕರಲ್ಲಿ ನೆಗೆಟಿವ್ ಭಾವನೆ ಬೆಳೆಯಲು ಕಾರಣವಾಗುತ್ತದೆ. ಈ ರೀತಿ ತಪ್ಪು ಮಾಡುವ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡುವುದಷ್ಟೆ ಅಲ್ಲ ಡಿಸ್ಮಿಸ್ ಮಾಡಲು ಸೂಚಿಸಲಾಗುವುದು ಅಂತಾ ಎಚ್ಚರಿಸಿದ್ದಾರೆ.
ಇದನ್ನೂ ಓದಿ: Weekend Curfew: ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ಮೂಡಿದೆಯೇ ಅಸಮಾಧಾನ!
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸ(Basavaraj Bommai House)ದ ಸಮೀಪ ಭದ್ರತೆಗೆಂದು ನಿಯೋಜಿಸಲಾದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿಕೊಡಿರುವುದು ಬೆಳಕಿಗೆ ಬಂದಿದೆ. ಇಂತಹ ಅಪರಾಧ ಕೃತ್ಯವನ್ನು ಪತ್ತೆ ಮಾಡಿ ಕಾನೂನು ಕ್ರಮ ತೆಗೆದುಕೊಂಡ ಅಧಿಕಾರಿಗಳನ್ನು ಅಭಿನಂದಿಸುವೆ ಹಾಗೂ ಸೂಕ್ತ ಬಹುಮಾನ ಘೋಷಿಸಲು ನಿರ್ದೇಶನ ನೀಡಿದ್ದೇನೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.
ಸಿಎಂ ನಿವಾಸಕ್ಕೆ ಭದ್ರತೆಗಿದ್ದ ಪೊಲೀಸರಿಂದಲೇ ಗಾಂಜಾ ಮಾರಾಟ!
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ನಿವಾಸದ ಭದ್ರತೆಗೆ ನಿಯೋಜನಗೊಂಡಿದ್ದ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್ ಗಾಂಜಾ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿಒಟ್ಟಾರೆ 7 ಮಂದಿಯನ್ನು ಬಂಧಿಸಲಾಗಿದೆ. ಸಿಎಂ ಅವರ ಬೆಂಗಳೂರು ಆರ್.ಟಿ.ನಗರ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ಕೋರಮಂಗಲ ಠಾಣೆಯ ಶಿವಕುಮಾರ್ ಹಾಗೂ ಸಂತೋಷ್ ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಬೈಕ್ ಮಾರಾಟಗಾರರೇ ಎಚ್ಚರ! ಸ್ಕೂಟರ್ ಜತೆ 1 ಲಕ್ಷ ಹಣವನ್ನೂ ಹೊತ್ತೊಯ್ದ ಚಾಲಾಕಿ ಚೋರ
ಬಂಧಿತರಿಂದ 500 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಆರ್.ಟಿ.ನಗರ ಪೊಲೀಸರು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಮನೆ ಭದ್ರತೆಗೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿ ಯಾವುದೇ ಭಯವಿಲ್ಲದೆ ಡ್ರಗ್ಸ್ ಪೆಡ್ಲರ್‌ಗಳ ಜೊತೆಗೆ ಶಾಮೀಲಾಗಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿರುವುದು ಚರ್ಚೆಗೆ ಕಾರಣವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.