ಬೆಂಗಳೂರು:  ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕಾಣಿಸಿಕೊಂಡಿರುವ ಕಾಡ್ಗಿಚ್ಚಿನ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಂಡೀಪುರ ಮೀಸಲು ಅರಣ್ಯ ಪ್ರದೇಶದಲ್ಲಿನ ಅಗ್ನಿದುರಂತ ನೋವನ್ನುಂಟುಮಾಡಿದೆ. ಅಲ್ಲಿ ತಕ್ಷಣವೇ ಪರಿಸ್ಥಿತಿಯನ್ನು ಹತೋಟಿಗೆ ತರಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಹಾಗೂ ವನ್ಯಜೀವಿಗಳಿಗೆ ಹೆಚ್ಚಿನ ಹಾನಿಯುಂಟಾಗದಂತೆ ನಿಗಾ ವಹಿಸಲಾಗಿದೆ ಎಂದಿದ್ದಾರೆ.



ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಶನಿವಾರ ರಾತ್ರಿ ಹಬ್ಬಿದ ಕಾಡ್ಗಿಚ್ಚಿನಿಂದಾಗಿ ಸುಮಾರು 5 ಸಾವಿರ ಎಕರೆ ಅರಣ್ಯ ಪ್ರದೇಶ ಧಗ ಧಗ ಹೊತ್ತಿ ಉರಿದಿದೆ. ಇದರಿಂದಾಗಿ ವನ್ಯ ಸಂಕುಲ ತೀವ್ರ ಸಂಕಷ್ಟಕ್ಕೀಡಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.