ನಕಲಿ ಜಿಎಸ್‌ಟಿ ಇನ್ವಾಯ್ಸ್ ತಡೆಗಟ್ಟಲು ಕ್ರಮ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿ 2437 ಕಂಪೆನಿಗಳು ಸಿಕ್ಕಿಬಿದ್ದಿವೆ ಎಂದರು.

Written by - Prashobh Devanahalli | Last Updated : Dec 12, 2024, 05:10 PM IST
  • ನಕಲಿ ಜಿಎಸ್‌ಟಿ ಇನ್ವಾಯ್ಸ್ ತಡೆಗಟ್ಟಲು ಕ್ರಮ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
  • ವಿಧಾನ ಪರಿಷತ್ತಿನಲ್ಲಿ ತಿಳಿಸಿದ ಸಿಎಂ
ನಕಲಿ ಜಿಎಸ್‌ಟಿ ಇನ್ವಾಯ್ಸ್ ತಡೆಗಟ್ಟಲು ಕ್ರಮ: ಸಿಎಂ ಸಿದ್ದರಾಮಯ್ಯ title=

ಬೆಳಗಾವಿ : ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿ.ಎಸ್.ಟಿ ವಂಚನೆ ಮಾಡದಂತೆ ತಡೆಯಲು  ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಂ. ನಾಗರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿ 2437 ಕಂಪೆನಿಗಳು ಸಿಕ್ಕಿಬಿದ್ದಿವೆ ಎಂದರು.

ಇದನ್ನೂ ಓದಿ:  ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಈ ತೆರಿಗೆ ವಂಚನೆ ಅಕ್ರಮವನ್ನು ತಡೆಗಟ್ಟಲು ಸರ್ಕಾರದಿಂದ ನೇಮಕಗೊಂಡ ರಾಜ್ಯ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ  ವಿಭಾಗದ ಅಧಿಕಾರಿಗಳು  752 ಪ್ರಕರಣಗಳಲ್ಲಿ ತಪಾಸಣೆ ಭಾಗದ ಕೈಗೊಂಡಿದ್ದಾರೆ ಸದರಿ ಪ್ರಕರಣಗಳಲ್ಲಿ 429 ವಂಚನೆ ಪ್ರಕರಣಗಳಿಗೆ ನ್ಯಾಯನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣ ಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ ಎಂದರು.

ನಕಲಿ ಇನ್ವಾಯ್ಸ್ ಗಳ ಮೂಲಕ ರಾಜ್ಯದ ತೆರಿಗೆ ಸೋರಿಕೆಯಾಗದಂತೆ  ರಾಜ್ಯದ ಜಿ.ಎಸ್.ಟಿ. ಜಾರಿ ವಿಭಾಗದ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಹಿರಿಯ ನಟನಿಂದ ಹಲ್ಲೆ..! ಮೈಕ್‌ನಿಂದ ವರದಿಗಾರನ ತಲೆ ಓಡೆದ ಮೋಹನ್‌ ಬಾಬು.. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News