ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಬೆಂಗಳೂರು: ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಅವರು ಇಂದು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.
ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?
ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.
ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.
ಇದನ್ನೂ ಓದಿ: Murugesh R Nirani: 2365.99 ಕೋಟಿ ರೂ. ಬಂಡವಾಳ ಆಕರ್ಷಿಸಿದ ರಾಜ್ಯ, 10904 ಉದ್ಯೋಗ ಸೃಷ್ಟಿ
ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.