ಬೆಳಗಾವಿ: ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಭರವಸೆ ನೀಡಿದರು.


COMMERCIAL BREAK
SCROLL TO CONTINUE READING

ಬೆಳಗಾವಿಯಲ್ಲಿ ಬುಧವಾರ ನಡೆದ ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ವಿಪಕ್ಷ ಸದಸ್ಯ ಚಿದಾನಂದ ಅವರು ಅತಿಥಿ ಉಪನ್ಯಾಸಕರ ಹೋರಾಟ ಮತ್ತು ವಿದ್ಯಾರ್ಥಿಗಳ ಸಮಸ್ಯೆ ಕುರಿತು ಸಚಿವರ ಗಮನಕ್ಕೆ ತಂದರು.


ಇದನ್ನೂ ಓದಿ: ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ?


ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಂಡಿರುವ ಮಾದರಿಯನ್ನು ಅನುಸರಿಸಬೇಕು. ಈ ವಿಷಯದಲ್ಲಿ ಪ್ರತಿ ಸಲವೂ ಉಮಾದೇವಿ ಪ್ರಕರಣವನ್ನು ಮುಂದಿಟ್ಟುಕೊಂಡು ಅತಿಥಿ ಉಪನ್ಯಾಸಕರಿಗೆ ಆಗುವ ಅನ್ಯಾಯ ನಿಲ್ಲಬೇಕಾದರೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಯುಜಿಸಿ ನಿಗದಿಯಂತೆ ವೇತನ ಪರಿಷ್ಕರಣೆ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಚಿದಾನಂದ ಅವರು ಸಲಹೆ ನೀಡಿದರು.


ಇದನ್ನೂ ಓದಿ: 2023 ರಲ್ಲಿ ಅತಿ ಹೆಚ್ಚು ಕಲೆಕ್ಷನ್‌ ಮಾಡಿದ ಟಾಪ್ 10 ಸಿನಿಮಾಗಳಿವು 


ಅತಿಥಿ ಉಪನ್ಯಾಸಕರ ಸಮಸ್ಯೆ ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದಾಗ ಉದ್ಭವಿಸಿದ್ದಲ್ಲ. ಸುಮಾರು 20 ವರ್ಷಗಳಿಂದ ಜೀವಂತವಾಗಿರುವ ಬೇಡಿಕೆ. ಈಗಾಗಲೇ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿ, ಹೋರಾಟ ಕೈ ಬಿಡುವಂತೆ ಮನವೊಲಿಸುವ ಪ್ರಯತ್ನ ವಿಫಲವಾಗಿದೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿದ್ದು, ಪರಿಹಾರ ಕಂಡುಕೊಂಡಿದ್ದೇವೆ. ಅದಕ್ಕೆ ಕೊಂಚ ಕಾಲಾವಕಾಶದ ಅಗತ್ಯವಿದೆ. ಶೀಘ್ರವೇ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಸಚಿವರು ಸದನದಲ್ಲಿ ತಿಳಿಸಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.