ನಟ ಅಜಯ್ ದೇವಗನ್ ಅವರದ್ದು ಅತಿರೇಖದ ಅಧಿಕ ಪ್ರಸಂಗತನ- ಕಿಚ್ಚ ಸುದೀಪ್ ಬೆಂಬಲಕ್ಕೆ ಕುಮಾರಸ್ವಾಮಿ
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಬೆಂಗಳೂರು: ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಈಗ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅಜಯ್ ದೇವಗನ್ ಹೇಳಿಕೆಗೆ ತೀಕ್ಷ್ಣ ರೂಪದ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ. 'ನಿಮಗೆ ನಾನು ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದರೆ ಹೇಗಿರ್ತಿತ್ತು....! ಅಜಯ್ ದೇವಗನ್ ಗೆ ತಿರುಗೇಟು ನೀಡಿದ ಕಿಚ್ಚ ಸುದೀಪ್
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ.ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Kiccha Sudeep : ಅಜಯ್ ದೇವಗನ್ ಗೆ ಬೆವರಿಳಿಸಿದ ಕಿಚ್ಚ ಸುದೀಪ್
ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ.ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ.ಅವರ 'ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು.ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ.ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ" ಎಂದು ಅವರು ಟೀಕಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.