close

News WrapGet Handpicked Stories from our editors directly to your mailbox

ಲೋಕಸಭೆ ಚುನಾವಣೆ 2019: ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರಕ್ಕೆ ನಟಿ ವಿಜಯಶಾಂತಿ

ರಾಜ್ಯದ ಹೈ ಪ್ರೊಫೈಲ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ತೆಲುಗು ನಟಿ ವಿಜಯಶಾಂತಿ ಅವರನ್ನು ಕರೆತರಲಿದ್ದಾರೆ.

Updated: Apr 18, 2019 , 10:48 AM IST
ಲೋಕಸಭೆ  ಚುನಾವಣೆ 2019: ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರಕ್ಕೆ ನಟಿ ವಿಜಯಶಾಂತಿ

ಕಲಬುರಗಿ: ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಇಂದು ರಾಜ್ಯದ 14 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಉಳಿದ 14 ಸ್ಥಾನಗಳಿಗೆ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 23ರ ಚುನಾವಣೆಗೆ ಅಂತಿಮ ಹಂತದ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿರುವ ಅಭ್ಯರ್ಥಿಗಳು ಗೆಲುವು ಸಾಧಿಸಲು ನಾನಾ ಕಸರತ್ತು ನಡೆಸಿದ್ದಾರೆ. 

ರಾಜ್ಯದ ಹೈ ಪ್ರೊಫೈಲ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ತೆಲುಗು ನಟಿ ವಿಜಯಶಾಂತಿ ಅವರನ್ನು ಕರೆತರಲಿದ್ದಾರೆ ಎನ್ನಲಾಗಿದೆ. ಕರ್ನಾಟಕ-ಆಂದ್ರ ಗಡಿ ಭಾಗದ ಮತದಾರರನ್ನು ಸೆಳೆಯಲು ಖರ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ.

ಮೂಲಗಳ ಪ್ರಕಾರ, ಏಪ್ರಿಲ್ 19ರಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನಾಲ್ಕು ಕಡೆಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ನಟಿ ವಿಜಯಶಾಂತಿ ಅವರು ಭಾಗಿಯಾಗಲಿದ್ದು, ಖರ್ಗೆ ಪರವಾಗಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಈಗಾಗಲೇ ಸತತ 9 ಬಾರಿ ಶಾಸಕರಾಗಿ ಆಯ್ಕೆಯಾಗುವುದರ ಜತೆಗೆ ಸತತ 2 ಬಾರಿ ಸಂಸದರಾಗಿಯೂ ಗೆಲುವು ಸಾಧಿಸಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಖರ್ಗೆ, ಈ ಬಾರಿಯೂ ಕಲಬುರಗಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.