ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣ: ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ -ಡಾ.ಜಿ.ಪರಮೇಶ್ವರ್

ಯುವತಿ ಅಂಜಲಿ ಕೊಲೆ‌ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು,ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು  ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

Last Updated : May 17, 2024, 02:12 PM IST
  • ಯುವತಿ ಅಂಜಲಿ ಕೊಲೆ‌ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ
  • ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು, ಅದನ್ನು ಮಾಡುತ್ತೇವೆ - ಪರಮೇಶ್ವರ್
  • ಪೊಲೀಸರ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಅಮಾನತು
ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣ: ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ -ಡಾ.ಜಿ.ಪರಮೇಶ್ವರ್  title=

ಬೆಂಗಳೂರು :ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಡಿಜಿಪಿ ಅವರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಪದೇಪದೇ ಇಂತಹ ಘಟನೆಗಳು ಸಂಭವಿಸುತ್ತಿವೆ.ಇದಕ್ಕೆ ಕಾರಣ ಏನು? ಯಾವ ಫ್ಯಾಕ್ಟರ್ ಎಂಬುದನ್ನು ಗುರುತಿಸಿ ವರದಿ ಸಲ್ಲಿಸಲಿದ್ದಾರೆ. ಬಳಿಕ ಸಾಧ್ಯವಾದರೆ ನಾನು ಹೋಗಿ ಬರುತ್ತೇನೆ ಎಂದು ಹೇಳಿದರು.

ಯುವತಿ ಅಂಜಲಿ ಕೊಲೆ‌ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು, ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ.ಪೊಲೀಸರ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಅಮಾನತು ಮಾಡಲಾಗಿದೆ.ಮುಂದೆ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡುತ್ತೇವೆ‌ ಎಂದು ತಿಳಿಸಿದರು.

ಇದನ್ನೂ ಓದಿ : Karnataka: ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತದಾರರಿಗೆ ಹಣದ ಆಮಿಷ!!

ಬೆದರಿಕೆ ಬಗ್ಗೆ ದೂರು ಕೊಟ್ಟಿದ್ದರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಪೋಷಕರು ರಿಟರ್ನ್ ಕಂಪ್ಲೇಂಟ್ ಕೊಟ್ಟಿಲ್ಲ.ಈ ಬಗ್ಗೆ ತಿಳಿಸಿದ್ದರು ಎಂಬುದು ನನಗೆ ಬಂದಿರೋ ವರ್ತಮಾನ.ಅದಕ್ಕಾಗಿ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.ಅಧಿಕಾರಿಗಳ ತಪ್ಪು ಕಂಡು ಬಂದರೆ ಮುಂದಿನ ಕ್ರಮ ಜರುಗಿಸಲಾಗುವುದು'ಎಂದರು

ಎಸ್ಐಟಿ ರಿಪೋರ್ಟ್ ಮಂಡ್ಯ ಶಾಸಕರಿಗೆ ಹೋಗುತ್ತಿದೆ ಎನ್ನುವ ವಿಚಾರದ ಬಗ್ಗೆ ಮಾತಾಡಿದ ಪರಮೇಶ್ವರ್, 'ಇಂತಹ ವಿಚಾರಗಳನ್ನು ಸಾರ್ವಜನಿಕ ವಲಯಕ್ಕೆ ತರುವುದು ಸರಿಯಲ್ಲ ಎಂಬುದು ಕುಮಾರಸ್ವಾಮಿಯವರಿಗೂ ಚೆನ್ನಾಗಿ ಗೊತ್ತಿದೆ. ತನಿಖೆ ನಡೆಯುತ್ತಿದೆ. ಮಂಡ್ಯ ಶಾಸಕರಿಗೆ ಯಾರು ಬ್ರೀಫಿಂಗ್ ಮಾಡುತ್ತಾರೆ? ಸುಮ್ಮನೆ ಇದೆಲ್ಲ ಹೇಳೋದು ಸುಲಭ.ನಮಗೆಲ್ಲ ತುಂಬ ಜವಾಬ್ದಾರಿ ಇದೆ. ಜವಾಬ್ದಾರಿಯಿಂದ ಕೆಲಸ ಮಾಡುತ್ತೇವೆ. ಯಾವ ಮುಲಾಜಿಗೂ ಕೂಡ ಒಳಪಡುವುದಿಲ್ಲ. ಇದನ್ನು  ಕುಮಾರಸ್ವಾಮಿಯವರಿಗೂ ಸಹ ಹೇಳಲು ಬಯಸುತ್ತೇನೆ. ಎಸ್ಐಟಿ ಸಮರ್ಥವಾಗಿ ಕೆಲಸ ಮಾಡುತ್ತಿದೆ. ನನಗಾಗಲಿ ಅಥವಾ ಮುಖ್ಯಮಂತ್ರಿಯವರಿಗಾಗಲಿ ಯಾವುದನ್ನು ಬ್ರೀಫಿಂಗ್ ಮಾಡಬೇಕೋ ಅದನ್ನು ಎಸ್ಐಟಿ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ಬ್ಯಾಂಕುಗಳು ಒಪ್ಪದಿದ್ದರೆ ಸಾಲ ಮನ್ನಾ ಮಾಡಿ, ರೈತರಿಗೆ ವಿಶೇಷ ಸಹಾಯಧನ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಸಂಸದ ಪ್ರಜ್ವಲ್‌ ರೇವಣ್ಣನನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆ ನಡೆಯುತ್ತಿದೆ.ಅವರನ್ನು ಕರೆತಂದು, ಏನೆಲ್ಲ ಕಾನೂನು ಕ್ರಮ ಕೈಗೊಳ್ಳಬೇಕೋ ಅಲ್ಲಿಯವರೆಗೂ ನಡೆಯುತ್ತಿರುತ್ತದೆ' ಎಂದರು.ಇನ್ನು ಪ್ರಜ್ವಲ್ ರೇವಣ್ಣ ಅವರಿಗೆ ಸರ್ಕಾರ ಸಹಾಯ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, 'ಬಿಜೆಪಿಯವರು ಹೇಳುತ್ತಾರೆ, ಜನತಾದಳದವರು ಹೇಳುತ್ತಾರೆ. ಸರ್ಕಾರಕ್ಕೆ ಜವಾಬ್ದಾರಿ ಇದೆಯಲ್ಲವೇ? ಇಂತಹ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಲು ಆಗುತ್ತದೆಯೇ? ವಿಪಕ್ಷದಲ್ಲಿರುವ ಅವರು ಅದನ್ನೇ ಹೇಳಬೇಕು. ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ ಎಂದು ಹೇಳಲು ಅವರಿಗೆ ಸಾಧ್ಯವಿಲ್ಲ. ಅದು ನನಗು ಅರಿವಿದೆ. ನಾವು ಮಾಡಬೇಕಾದ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News