ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರೆದಿದ್ದ ಶಾಸಕರ ಸಮಾಲೋಚನಾ ಸಭೆಯಲ್ಲಿ , ಕೆಲವು ಸಚಿವರ ಕಾರ್ಯವೈಖರಿ ವಿರುದ್ಧ ಶಾಸಕರು ಬಹಿರಂಗವಾಗಿಯೇ ದೂರು ನೀಡಿದ್ದಾರೆ. ಖಾಸಗಿ ಹೋಟೆಲ್‍ನಲ್ಲಿ ಮೊದಲು ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಸಭೆಯನ್ನು ಕರೆಯಲಾಗಿತ್ತು. ಕೆಲವು ಸಚಿವರು ತಮ್ಮನ್ನು ಕಡೆಗಣಿಸುತ್ತಿದ್ದು, ಪ್ರತಿಪಕ್ಷಗಳ ಶಾಸಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವರು ಜಿಲ್ಲೆಗಳಿಗೆ ಭೇಟಿ ನೀಡುವುದನ್ನು ಸಹ ನಮ್ಮ ಗಮನಕ್ಕೆ ತರುವುದಿಲ್ಲ. ಕೆಡಿಪಿ ಸಭೆಗೆ ಕರೆಯುವುದೂ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿಯನ್ನೂ ನೀಡುವುದಿಲ್ಲ. ನಮ್ಮ ಪಕ್ಷದ ಶಾಸಕರಿಗಿಂತಲೂ ಕಾಂಗ್ರೆಸ್(Congress)-ಜೆಡಿಎಸ್ ಶಾಸಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


KPTCL ‌ನಲ್ಲಿ 200 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ..!


ಸಚಿವರ ಜಿಲ್ಲಾ ಪ್ರವಾಸ ನಮಗಿಂತಲೂ ಹೆಚ್ಚಾಗಿ ಅನ್ಯ ಪಕ್ಷಗಳ ಶಾಸಕರಿಗೆ ಎಲ್ಲಾ ಮಾಹಿತಿ ಇರುತ್ತದೆ. ನಮಗೆ ಯಾವ ಮಾಹಿತಿಯನ್ನು ನೀಡುವುದಿಲ್ಲ. ಕೆಲವರನ್ನು ಬಿಟ್ಟರೆ ಬಹುತೇಕರು ನಮ್ಮನ್ನು ಮಲತಾಯಿಯಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.


H D Kumaraswamy : ಸಂಕ್ರಾಂತಿ ಬಳಿಕ ಜೆಡಿಎಸ್ ನಲ್ಲಿ ಭಾರೀ ಬದಲಾವಣೆ.. ಏನಿರಬಹುದು ಚೇಂಜ್ !?


ಸಚಿವರು ಜಿಲ್ಲಾ ಪ್ರವಾಸ ಬಂದ ಮೇಲೆ ಶಾಸಕರಿಗೆ ಕಡ್ಡಾಯವಾಗಿ ಮಾಹಿತಿ ನೀಡುವುದು ಶಿಷ್ಟಾಚಾರ. ಕೆಡಿಪಿ ಸಭೆಗೆ ನಮ್ಮನ್ನು ಆಹ್ವಾನಿಸದೆ ಯಾಕೆ ಕಡೆಗಣಿಸುತ್ತಿದ್ದಾರೆ ಎಂದು ತಿಳಿದಿಲ್ಲ. ನಮ್ಮ ಕ್ಷೇತ್ರಗಳ ಸಮಸ್ಯೆಯನ್ನು ನಾವು ಅಲ್ಲಿ ಪ್ರಸ್ತಾಪಿಸದೆ ಎಲ್ಲವನ್ನು ಮುಖ್ಯಮಂತ್ರಿಗಳ ಬಳಿ ಹೇಳಲು ಸಾಧ್ಯವೇ ಎಂದು ಸಭೆಯಲ್ಲಿ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.


ಈ ನಗರದಿಂದ Kempegowda International Airport ತಲುಪಲು ಕೇವಲ 15 ರೂ. ಸಾಕು!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.