ಮೊರಾರ್ಜಿ ಹಾಗೂ ಇತರ ವಸತಿ ಶಾಲೆಗಳ ಪ್ರವೇಶ: ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಮಗುವಿನ SATS NUMBER, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿಯ ಝರಾಕ್ಸ್ ಹಾಗೂ ಮಗುವಿನ ಇತ್ತೀಚಿನ ಭಾವಚಿತ್ರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kreis.kar.nic.in ಅಥವಾ ದೂರವಾಣಿ ಸಂಖ್ಯೆ 0836-2447201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಎನ್.ಆರ್. ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ-Pots Office ಈ ಯೋಜನೆಯಲ್ಲಿ ₹150 ಉಳಿತಾಯ ಮಾಡಿ ₹20 ಲಕ್ಷ ಲಾಭ ಪಡೆಯಿರಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.