ವಸತಿ ಶಾಲೆಗಳಿಗೆ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ.ಬಿ.ಆರ್.ಅಂಬೇಡ್ಕರ್/ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ವರ್ಷದ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

Written by - Manjunath N | Last Updated : Jan 2, 2024, 05:50 PM IST
  • ಪ್ರಸ್ತುತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರ ಪತ್ರದನ್ವಯ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 06 ವರೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಲಾಗಿದೆ.
  • ಇಲ್ಲಿವರೆಗೆ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ title=
file photo

ಕೊಪ್ಪಳ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ.ಬಿ.ಆರ್.ಅಂಬೇಡ್ಕರ್/ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ವರ್ಷದ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ: Sevasindhu Application Guide; ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆಯಿರಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ರವರ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಆಯಾ ವಸತಿ ಶಾಲೆಗಳ ಪ್ರಾಚಾರ್ಯರಿಂದ ಅರ್ಜಿ ಪಡೆದು ಭರ್ತಿ ಮಾಡಿ ಯಾವುದಾದರು ವಸತಿ ಶಾಲೆಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಮೊದಲು ಅರ್ಜಿ ಸಲ್ಲಿಕೆಗೆ ಡಿ.31 ಕೊನೆಯ ದಿನವಾಗಿ ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ: Kaatera Collections: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರುವ ದರ್ಶನ್ ಅಭಿನಯದ 'ಕಾಟೇರ'.. ನಾಲ್ಕು ದಿನದ ಕಲೆಕ್ಷನ್ ಎಷ್ಟು?

ಪ್ರಸ್ತುತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರ ಪತ್ರದನ್ವಯ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 06 ವರೆಗೆ ಮತ್ತೊಮ್ಮೆ ದಿನಾಂಕ ವಿಸ್ತರಿಸಲಾಗಿದೆ. ಇಲ್ಲಿವರೆಗೆ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News