Cyber Crime: ಸೈಬರ್ ಅಪರಾಧ ತಡೆಗೆ ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳ ಅಗತ್ಯವಿದೆ. ಇದರೊಂದಿಗೆ ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


COMMERCIAL BREAK
SCROLL TO CONTINUE READING

ಇಂದು ದಕ್ಷಿಣ ಭಾರತ  ರಾಜ್ಯಗಳ ಪೋಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಗಲಿರುಳು ಎನ್ನದೇ ಕಾರ್ಯನಿರ್ವಹಿಸುವ ಪೋಲಿಸ್ ಪಡೆಗಳ ಕಾರ್ಯವನ್ನು  ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟುವಲ್ಲಿ  ನಿಟ್ಟಿನಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿಯಾಗಿದೆ ಎಂದರು. 


ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳು ಸೈಬರ್ ಅಪರಾಧಿಗಳನ್ನು ಮಟ್ಟಹಾಕಲು ಸಹಾಯಕವಾಗಿವೆ. 2003 ರಲ್ಲಿ ಸೈಬರ್ ಅಪರಾಧಗಳ ಪೋಲೀಸ್ ಠಾಣೆಯನ್ನು ತೆರೆದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಅಪರಾಧ ತಡೆಗಾಗಿ ಸಿಇಎನ್ ಪೋಲಿಸ್ ಠಾಣೆಗಳನ್ನು ರಾಜ್ಯ ಹೊಂದಿದೆ. ಇಂಥ ಪ್ರಕರಣಗಳನ್ನು ನಿರ್ವಹಿಸಲೆಂದೇ ಸೈಬರ್ ಠಾಣೆಯ ಪೋಲಿಸ್ ಅಧಿಕಾರಿಗಳು ವಿಶೇಷ ತರಬೇತಿ ಪಡೆದಿದ್ದಾರೆ ಎಂದರು.


ಇದನ್ನೂ ಓದಿ- ಸರ್ಕಾರಕ್ಕೆ ಶತದಿನ: ಆಡಳಿತಕ್ಕೆ ಬಿಸಿ ಮುಟ್ಟಿಸಲು ಡಿಸಿ, ಸಿಇಓಗಳ ಜತೆ ಸಿಎಂ ಸಭೆ


ಆಂತರಿಕ ಭದ್ರತೆ: 
ನಮ್ಮ ದೇಶದ ಬುನಾದಿ ಹಾಗೂ ಸಮಾಜದ ಸಂರಚನೆಗೆ ಸವಾಲಾಗಿರುವ  ಆಂತರಿಕ ಭದ್ರತಾ ವಿಷಯಗಳು  ತಮ್ಮ ಸಂಪೂರ್ಣ ಗಮನ ಮತ್ತು  ಸಹಯೋಗ ಅಗತ್ಯ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ವ್ಯವಸ್ಥೆ ಹಾಗೂ ತಮ್ಮ ಪ್ರದೇಶದ ಪ್ರತಿಯೊಬ್ಬರ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು  ಹೊತ್ತಿರುವ ಪೋಲೀಸರಿಂದ ಅಚಲ  ಬದ್ಧತೆ, ಸಮರ್ಪಣೆ ಹಾಗೂ ಕರ್ತವ್ಯಪರತೆಯನ್ನು ನಿರೀಕ್ಷಿಸಲಾಗುತ್ತದೆ ಎಂದವರು ತಿಳಿಸಿದರು. 


ಇದನ್ನೂ ಓದಿ- ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಸಿಎಂ ಸಿದ್ದರಾಮಯ್ಯ


ಪೋಲಿಸ್ ತಂತ್ರಗಾರಿಕೆಯಲ್ಲಿ ನಿರಂತರ ಮಾರ್ಪಾಡು ಅಗತ್ಯ!
ಇತ್ತೀಚಿನ ದಿನಗಳಲ್ಲಿ  ಸಾಂಪ್ರದಾಯಿಕ ಅಪರಾಧಿ ಚಟುವಟಿಕೆಗಳಿಂದ ಹಿಡಿದು ಡಿಜಿಟಲ್ ವಲಯದ ಬೆದರಿಕೆಗಳನ್ನೂ ದೇಶ ಎದುರಿಸುತ್ತಿದೆ. ಆಧುನಿಕ ಸಮಾಜದ ಸಂಕೀರ್ಣತೆಗಳೂ ಕೂಡ ಹೊಸ ಮಾದರಿಯ ಅಪರಾಧಗಳನ್ನು ಹೆಚ್ಚಿಸಿವೆ. ಇದರಿಂದಾಗಿ ಪೋಲಿಸ್ ತಂತ್ರಗಾರಿಕೆಯಲ್ಲಿಯೂ ನಿರಂತರವಾಗಿ ಮಾರ್ಪಾಡು ತರಬೇಕಾದ ಅವಶ್ಯಕತೆ ಇದೆ ಎಂದು ಇದೇ ವೇಳೆ ಸಿಎಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. 


ಕಾನೂನು ಪಾಲಕರಾಗಿ ತಾವುಗಳು ಸಮಾಜದ ಸ್ವಾಸ್ವ್ಥವನ್ನು ಹಾಳು ಮಾಡುವವರಿಂದ, ಶಾಂತಿ ಕದಡುವವರಿಗಿಂತ ಒಂದು ಹೆಜ್ಜೆ ಮುಂದಿರಿರಬೇಕಲ್ಲದೇ ಶೀಘ್ರವಾಗಿ ಹೊಂದಿಕೊಂಡು ನವೀನ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕಿವಿ ಮಾತು ಹೇಳಿದರು. 


ಮಾದಕವಸ್ತು ನಿಯಂತ್ರಣ: 
ಮಾದಕವಸ್ತು ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಪೋಲಿಸ್ ಅತ್ಯುತ್ತಮ ಕೆಲಸ ಮಾಡಿದ್ದು ಅಂತರರಾಷ್ಟ್ರೀಯ ಮಾದಕವಸ್ತು ಜಾಲವನ್ನು ಪತ್ತೆ ಹಚ್ಚಲಾಗಿದೆ. ಡಾರ್ಕ್‍ವೆಬ್ ಮೂಲಕ  ನಡೆಸುವ ಡ್ರಗ್ಸ್ ಜಾಲವನ್ನೂ ಕೂಡ ಬೇಧಿಸಲಾಗಿದೆ.  ರಾಜ್ಯದಲ್ಲಿ ನಕ್ಸಲ್  ಚಟುವಟಿಕೆಗಳನ್ನು ನಿಗ್ರಹಿಸಲಾಗಿದ್ದರೂ, ಕರ್ನಾಟಕದ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ನಡುವೆ  ಈ ಸಮಸ್ಯೆಯನ್ನು ಮಟ್ಟಹಾಕಲು ಹೆಚ್ಚಿನ ಸಹಕಾರ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.