ಬೆಂಗಳೂರು: ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ (City Civil Court) ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್‌ (Advocate Jagadish)ಅವರನ್ನು ಪೊಲೀಸರು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ‌ ಆರೋಪಿಸಿ ಶನಿವಾರ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್​​ಗೆ ದೂರು ನೀಡಿದ್ದರು. 


ವಕೀಲ ಜಗದೀಶ್ ರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನ ಮಾಡುವುದಕ್ಕೆ ಒಂದನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: IPL 2022 mega auction: ಮೊದಲ ದಿನದ ಹರಾಜಿನ ಬಳಿಕ ಯಾವ ಆಟಗಾರ ಯಾರ ತಂಡ ಸೇರಿದ್ದಾರೆ?


 


ಈ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ ವಿಭಾಗದ ಪೊಲೀಸರಿಗೆ ಕಮಲ್ ಪಂತ್ ಸೂಚಿಸಿದ್ದರು. ವಕೀಲ ಜಗದೀಶ್ ಅವರನ್ನು ಬಂಧಿಸಿರುವ ಕೇಂದ್ರ ವಿಭಾಗದ ಪೊಲೀಸರು ಕೋರಮಂಗಲ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ.


ಬೆಂಗಳೂರು ವಕೀಲರ‌ ಸಂಘ (Bangalore Lawyers Association) ನೀಡಿದ್ದ ದೂರಿನಡಿ ಪ್ರಕರಣ ಪೊಲೀಸರು ‌ದಾಖಲಿಸಿಕೊಂಡಿದ್ದರು. ಭಾನುವಾರ ಬೆಳಗಿನ ಜಾವ ಕೊಡಿಗೇಹಳ್ಳಿಯಲ್ಲಿರುವ ಮನೆಯಲ್ಲಿ ಜಗದೀಶ್ ಅವರನ್ನು ಬಂಧಿಸಲಾಗಿದೆ. 


"ವಕೀಲರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಜಗದೀಶ್, ವೃತ್ತಿಗೆ ಚ್ಯುತಿ ಬರುವ‌ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಗಲಾಟೆ ಮಾಡಿ ನ್ಯಾಯಾಲಯದ ‌ಆವರಣದಲ್ಲಿ ಅಶಾಂತಿ ವಾತಾವರಣ ನಿರ್ಮಿಸಿದ್ದರೆ" ಎಂದು ಆರೋಪಿಸಲಾಗಿದೆ.


ಪ್ರಕರಣವೊಂದರ ಸಂಬಂಧ ಶುಕ್ರವಾರ ಬೆಳಗ್ಗೆ ಸಿಟಿ ಸಿವಿಲ್ ಕೋರ್ಟ್‌ಗೆ ದಾಖಲೆ ಸಲ್ಲಿಸಲು ಹೋದಾಗ ಕೆಲವರು ತಮ್ಮ ಮೇಲೆ ಮತ್ತು ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆಸಿದ್ದಾರೆಂದು ಜಗದೀಶ್ ಆರೋಪಿಸಿದ್ದರು. 


 


ಇದನ್ನೂ ಓದಿ:"ಚಲನಚಿತ್ರಗಳ ಹೆಸರಿನಲ್ಲಿ ಕಸವನ್ನು ಮಾರಾಟ ಮಾಡಬೇಡಿ": 'ಗೆಹರಾಯಿಯಾ' ಬಗ್ಗೆ ಕಂಗನಾ ಕಾಮೆಂಟ್


ಶನಿವಾರ ವಕೀಲರ ಸಂಘ  ಪೊಲೀಸ್‌ ಆಯುಕ್ತರಿಗೆ (Police Commissioner) ದೂರು ನೀಡಿತ್ತು. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಎಲ್ಲಾ ಘಟನೆಗಳನ್ನೂ ಬೆಂಗಳೂರು ವಕೀಲರ ಸಂಘ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿತ್ತು. 


ಸಾಮಾಜಿಕ ಮಾಧ್ಯಮಗಳಲ್ಲಿ ವಕೀಲರನ್ನು ಅವಾಚ್ಯಶಬ್ದಗಳಿಂದ ನಿಂದಿಸಿದ್ದಾರೆ. ವಕೀಲ ಮಿತ್ರರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆದ ಕಾರಣ ಕೆ.ಎನ್ ಜಗದೀಶ್ ಮಹಾದೇವ್ ಅವರ ವಿರುದ್ಧ ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್ (Kamal Pant) ಅವರಿಗೆ ದೂರು ಸಲ್ಲಿಸಿದ್ದಾಗಿ ವಕೀಲರ ಸಂಘ ತಿಳಿಸಿತ್ತು. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.