ದಾವಣಗೆರೆ: ಅನೇಕ ಸಮುದಾಯಗಳು ವಿವಿಧ ವರ್ಗಗಳ ಅಡಿಯಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿರುವುದರಿಂದ, ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಮಸ್ಥಾನ ಕನಕ ಗುರು ಪೀಠದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವ ಬೊಮ್ಮಾಯಿ(Basavaraj Bommai), ಹಿಂದುಳಿದ ವರ್ಗಗಳ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಮೀಸಲಾತಿಯನ್ನು ಶೇಕಡಾ 50 ಕ್ಕಿಂತ ಜಾಸ್ತಿ ಹೆಚ್ಚಿಸಲು ರಾಜ್ಯ ಸರ್ಕಾರ ಸುಪ್ರೀಂನಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಷಯದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಒಮ್ಮತವಿತ್ತು ಆ ಕಾರಣದಿಂದಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದರು.
Covid-19 New Guidelines: ಕೋವಿಡ್ -19 ಮಾರ್ಗಸೂಚಿಯಲ್ಲಿ 'ಯು ಟರ್ನ್' ಹೊಡೆದ ರಾಜ್ಯ ಸರ್ಕಾರ!
ನಾವು ಸುಪ್ರೀಂ ಕೋರ್ಟ್(Supreme Court)ನಿಂದ ಉತ್ತಮ ನಿರ್ಧಾರವನ್ನು ನಿರೀಕ್ಷಿಸುತ್ತಿದ್ದೇವೆ. ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಎಸ್‌ಟಿ ಒತ್ತಾಯಿಸಿ ಹಾಲುಮತ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಅರ್ಜಿ ಸಲ್ಲಿಸಿರುವುದರಿಂದ, ಮೀಸಲಾತಿ ಮಿತಿಯನ್ನು ಶೇಕಡಾ 50 ಕ್ಕಿಂತ ಹೆಚ್ಚಿಸಬೇಕಾಗಿದೆ. ಕುರುಬ ಸಮುದಾಯವು ತಮ್ಮನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಬೇಕೆಂದು ಸಚಿವ ಬೊಮ್ಮಾಯಿ ಒತ್ತಿಹೇಳಿದ್ದಾರೆ.
ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ
ಈ ನಿಟ್ಟಿನಲ್ಲಿ ಸರ್ಕಾರವು ವಂಶಾವಳಿಯ ಅಧ್ಯಯನ(Study of Genealogy)ವನ್ನು ಕೈಗೊಳ್ಳುತ್ತದೆ. ಆದ್ರೆ, ಮೀಸಲಾತಿ ಹೆಚ್ಚಿಸುವುದು ಒಂದು ಸವಾಲಾಗಿದೆ ಏಕೆಂದರೆ ಅದು ಕಾನೂನುಬದ್ಧವಾಗಿ ಸಮರ್ಥವಾಗಿರಬೇಕು, ಅದು ಪ್ರಾಯೋಗಿಕವಾಗಿರಬೇಕು ಮತ್ತು ಸಂವಿಧಾನದ ಚೌಕಟ್ಟಿನೊಳಗೆ ಇರಬೇಕು. ಭವಿಷ್ಯದಲ್ಲಿ ಈ ನಿರ್ಧಾರವನ್ನು ಯಾರೂ ಪ್ರಶ್ನಿಸದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Covid-19: ಚಿಕ್ಕಮಗಳೂರಿನಲ್ಲಿ ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು
ರಾಜ್ಯ ಬಿಜೆಪಿ ಸರ್ಕಾರ(BJP Govt)ದ ಬಗ್ಗೆ ಮಾತನಾಡಿದ ಸಚಿವ ಬೊಮ್ಮಾಯಿ, ಯಾವುದೇ ಪಕ್ಷಪಾತವಿಲ್ಲದೆ ಸರ್ಕಾರ ಎಲ್ಲಾ ಸಮುದಾಯ ಮತ್ತು ಧರ್ಮಗಳನ್ನು ಸಮಾನವಾಗಿ ನೋಡಿಕೊಳ್ಳುತ್ತಿದೆ. ಸಿಎಂ ಅವರು ರಾಜ್ಯದ ಎಲ್ಲಾ ಸಮುದಾಯಗಳಿಗೆ ಎಲ್ಲ ರೀತಿಯ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.