8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ.

Written by - Prashobh Devanahalli | Last Updated : Jun 15, 2024, 08:11 PM IST
    • ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ
    • 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ
    • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ
8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ title=
File Photo

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016 ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.

ಇದನ್ನೂ ಓದಿ: ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಪ್ರಲ್ಹಾದ ಜೋಶಿ

ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಸಾಕಷ್ಟು ವರ್ಗಾವಣೆತ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು. ಕಾರಣ 2016 ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುದನ್ನ ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.

ಗ್ರೂಪ್ A ಯಿಂದ ಹಿಡಿದು ಗ್ರೂಪ್ ಡಿ ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31 ರೊಳಗೆ ಕೌನ್ಸಿಲಿಂಗ್ ಪೂರ್ಣಗೊಳ್ಳಲಿದೆ.

ಇದನ್ನೂ ಓದಿ: ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು? ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್!

ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಬೇರೆ ತಜ್ಞತೆ/ ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ B ನೌಕರರು, 5 ವರ್ಷ ಪೂರೈಸಿದ ಗ್ರೂಪ್ ಸಿ ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ ಡಿ ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ.. ಮೇಲ್ಕಣಿಸಿದ ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News