ಚಾಮರಾಜನಗರ: ಹಿಂದುಳಿದ ವರ್ಗಗಳ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಅಸ್ಥಿರ ಗೊಳಿಸಲು ಹೊರಟಿರುವ బిజీಪಿ, ಜೆಡಿಎಸ್ ಪಾದಯಾತ್ರೆ ವಿರುದ್ಧ ಶ್ರಮಿಕ ವರ್ಗಗಳ ಒಕ್ಕೂಟವು ಆ. 13 ರಂದು ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಮುಖಂಡ ಪು.ಶ್ರೀನಿವಾಸನಾಯಕ ತಿಳಿಸಿದರು.


COMMERCIAL BREAK
SCROLL TO CONTINUE READING

ನಗರದ  ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಮಾವೇಶಗೊಂಡು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಈ ಪ್ರತಿಭಟನೆಗೆ ಶ್ರಮಿಕ ವರ್ಗಕ್ಕೆ ಸೇರಿದ ಹಾಲಿ ಹಾಗೂ ಮಾಜಿ ಚುನಾಯಿತ ಜನಪ್ರತಿನಿಧಿಗಳು , ಯಜಮಾನರು, ಮುಖಂಡರುಗಳು, ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.


ಇದನ್ನೂ ಓದಿ: ಏನಿದು 'ನೈಗ್ಲೇರಿಯಾ ಫೌಲೆರಿ'! ಇದು ಮೆದುಳನ್ನು ಹೇಗೆ ಪ್ರವೇಶಿಸುತ್ತದೆ? ಈ ಬಗ್ಗೆ ವೈದ್ಯರು ಹೇಳುವುದೇನು?


ಸಿದ್ದರಾಮಯ್ಯ ಅವರು ಶ್ರಮಿಕ ವರ್ಗಗಳ ಪರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವುದನ್ನು ಸಹಿಸದೇ ಬಿಜೆಪಿ, ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ತಿರತೆಯನ್ನು ನಿರ್ಮಿಸಿ ಶ್ರಮಿಕ ವರ್ಗಗಳಿಗೆ ಸಿಗುವ ಸೌಲಭ್ಯಗಳನ್ನು ತಡೆಯುವ ಸಲುವಾಗಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ. ಅದ್ದರಿಂದ ಶ್ರಮಿಕ ವರ್ಗಗಳಿಗೆ ಆಗುವ ಅನ್ಯಾಯ ಹಾಗೂ ಶ್ರಮಿಕ ವರ್ಗಗಳ ನಾಯಕರ ಮೇಲೆ ಆಗುವ ರಾಜಕೀಯ ಅಸ್ಥಿರತೆಯನ್ನು ವಿರೋಧಿಸುವ ಸಲುವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.


ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆದ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಿಗುತ್ತಿವೆ. ಆದರಲ್ಲೂ ಈ ಯೋಜನೆಗಳು ಉಳ್ಳವರಿಗೆ ಹೆಚ್ಚು ಲಾಭವಾಗಿದೆ. ಬಿಜೆಪಿ, ಜೆಡಿಎಸ್ ಅವಧಿಯಲ್ಲೂ ಅನೇಕ ಹಗರಣಗಳು ನಡೆದಿದ್ದು ಯಾವುದೇ ಕ್ರಮವಾಗಿಲ್ಲ.  ನಿಮ್ಮ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪತ್ನಿಗೆ ನಿವೇಶನ ನೀಡಲಾಗಿದೆ. ನಿಮ್ಮ ಪಕ್ಷದ ಶಾಸಕರು ಕೂಡ ನಿವೇಶನ ಪಡೆದಿದ್ದಾರೆ ಅದರ ಬಗ್ಗೆ ಏಕೆ ಚಕಾರ ಎತ್ತದೆ ಮುಖ್ಯಮಂತ್ರಿ ಅವರನ್ನೇ ಟಾರ್ಗೆಟ್ ಮಾಡಿ ಅಧಿಕಾರದಿಂದ ಕೆಳಗಿಸಲು ಪಾದಯಾತ್ರೆ ಹಮ್ಮಿಕೊಂಡಿರುವುದು ಸರಿಯಲ್ಲ ಎಂದರು.  
ಬಿಜೆಪಿ, ಜೆಡಿಎಸ್ ನಾಯಕರ  ಒತ್ತಡ ಕ್ಕೆ ಮಣಿದು ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.


ಮೈಸೂರಿನಲ್ಲಿ ಕಾಂಗ್ರೆಸ್ ಇದೇ 9 ರಂದು ಬೃಹತ್‌ ಜನಾಂದೋಲನ‌ ಸಮಾವೇಶ ನಡೆಸಲಿದ್ದು ಇದಾದ ಬಳಿಕ ಅಭಿಮಾನಿಗಳು ಸಿಎಂ ಪರ ಗಡಿಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.