ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇತ್ತೀಚೆಗಷ್ಟೇ ಮುಷ್ಕರ ನಡೆಸಿದ್ದ ಸಾರಿಗೆ ಸಿಬ್ಬಂದಿ ಇದೀಗ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದಾರೆ.


COMMERCIAL BREAK
SCROLL TO CONTINUE READING

ಸಾರಿಗೆ ಇಲಾಖೆ ಸಿಬ್ಬಂದಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸದ ಹಿನ್ನೆಲೆಯಲ್ಲಿ ಮತ್ತೆ ಬಸ್ ಮುಷ್ಕರ(Bus Strike) ನಡೆಸಲು ಯೋಜನೆ ರೂಪಿಸಲಾಗಿದ್ದು, ಕೊಟ್ಟ ಭರವಸೆಯನ್ನು ಸರ್ಕಾರ ಈಡೇರಿಸದೇ ಇದ್ದಲ್ಲಿ ಹೋರಾಟ ನಡೆಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.


D.K Shivakumar: 'ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ'


ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಮೂರು ತಿಂಗಳಲ್ಲಿ ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಈವರೆಗೂ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಸಿಬ್ಬಂದಿಗಳ ಸಂಬಳ ಪಾವತಿಯನ್ನು ಬಾಕಿ ಉಳಿಸಿಕೊಂಡಿದೆ. ಈ ತಿಂಗಳಾಂತ್ಯದ ಒಳಗೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಮಾಡಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


Aero India 2021 : ಮೈನವಿರೇಳಿಸುವ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.