ಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರ್ಯಾಲೋಚನೆ ಪ್ರಸ್ತಾಪಿಸಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್.
ಬೆಂಗಳೂರು: "ಬೆಂಗಳೂರಿಗೆ ಆರ್ಥಿಕ ಶಕ್ತಿ ಹಾಗೂ ಆಡಳಿತದಲ್ಲಿ ಹೊಸ ರೂಪ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆಗೆ ನಮ್ಮ ಒಪ್ಪಿಗೆ ಇದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು (Greater Bengaluru Bill) ಪರ್ಯಾಲೋಚನೆ ಪ್ರಸ್ತಾಪಿಸಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ (DK Shivakumar)ಅವರು, "ಬೆಂಗಳೂರು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದು, ನಗರದ ಜನಸಂಖ್ಯೆ 1.40 ಕೋಟಿಗೆ ಏರಿದೆ. ಬೆಂಗಳೂರನ್ನು ಅತ್ಯುತ್ತಮ ನಗರವಾಗಿ ಮಾಡಬೇಕು. ಅಂತರರಾಷ್ಟೀಯ ಮಟ್ಟದಲ್ಲಿ ಬೆಂಗಳೂರು ಹೆಸರು ಮಾಡುತ್ತಿದ್ದು, ರಾಜ್ಯ ರಾಜಧಾನಿಗೆ ಹೊಸ ರೂಪ ನೀಡಲು ಗ್ರೇಟರ್ ಬೆಂಗಳೂರು ಬಿಲ್ ಗೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುತ್ತಿದ್ದೇನೆ" ಎಂದು ಹೇಳಿದರು.
ಇದನ್ನೂ ಓದಿ- ಮೂಡಾ ಅವ್ಯವಹಾರದ ತನಿಖೆಗೆ ಆಗ್ರಹಿಸಿ ವಿಪಕ್ಷಗಳ ಅಹೋರಾತ್ರಿ ಧರಣಿ ! ವಿಧಾನ ಸಭೆಯಲ್ಲಿಯೇ ನಿದ್ದೆಗೆ ಜಾರಿದ ನಾಯಕರು
ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಮತ್ತು ಶಾಸಕ ಎಸ್.ಟಿ.ಸೋಮಶೇಖರ್ (ST Somashekhar) ಅವರು ಮಾತನಾಡಿ ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದ ಸದನ ಸಮಿತಿ ರಚಿಸಬೇಕು. ವಿಶೇಷ ಚರ್ಚೆ ಮಾಡಬೇಕು. ಬಿಲ್ ಅನ್ನು ಬಾಕಿ ಇರಿಸಬೇಕು ಎಂದು ಎಂದು ಮನವಿ ಮಾಡಿದರು.
ಇದನ್ನೂ ಓದಿ- ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ
ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, "ಅಶೋಕ್ ಹಾಗೂ ಸೋಮಶೇಖರ್ ಅವರು ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನ ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ ಅವರು ನನ್ನನ್ನು ಭೇಟಿ ಮಾಡಿ ಒಂದಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನಮಗೂ ಸಹ ತರಾತುರಿಯಲ್ಲಿ ಈ ಬಿಲ್ ಅನ್ನು ತರುವ ಆಲೋಚನೆ ಇಲ್ಲ. ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ ಅವರ ಬಳಿಯೂ ಈ ವಿಚಾರವಾಗಿ ಚರ್ಚೆ ನಡೆಸಿದ್ದೇನೆ. ಈ ವಿಚಾರವಾಗಿ ಸದನ ಸಮಿತಿ ರಚನೆ ಮಾಡಲು ನಮ್ಮ ಒಪ್ಪಿಗೆಯಿದೆ" ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.